ಜೂಜುಕೋರರ ಬಂಧನ

71

Get real time updates directly on you device, subscribe now.


ಕುಣಿಗಲ್: ತಾಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75 ರಸ್ತೆಗೆ ಹೊಂದಿಕೊಂಡ ಪ್ರದೇಶದಲ್ಲಿ ತಡರಾತ್ರಿ 2 ರಿಂದ 3 ಗಂಟೆ ಸಮಯದಲ್ಲಿ ಅಕ್ರಮ ಜೂಜಾಟದಲ್ಲಿ ತೊಡಗಿದ್ದ ತಂಡದ ಮೇಲೆ ಅಮೃತೂರು ಪೊಲೀಸರು ದಾಳಿ ನಡೆಸಿ ನಗದು, ಇತರೆ ವಸ್ತು ವಶಕ್ಕೆ ಪಡೆದಿದ್ದಾರೆ.
ದೊರೆತ ಖಚಿತ ಮಾಹಿತಿ ಮೇರೆಗೆ ಡಿವೈಎಸ್ ಪಿ ಲಕ್ಷ್ಮೀಕಾಂತ ಮಾರ್ಗದರ್ಶನದಲ್ಲಿ ಸಿಪಿಐ ಮಾದ್ಯಾ ನಾಯಕ್ ನೇತೃತ್ವದಲ್ಲಿ ಪಿಎಸೈ ಶಮಂತಗೌಡ, ಗಸ್ತುಪೇದೆ ಪ್ರಶಾಂತ್ ಇತರೆ ಸಿಬ್ಬಂದಿ ದಾಳಿ ನಡೆಸಿ ಜೂಜಾಟದಲ್ಲಿ ನಿರತರಾಗಿದ್ದ 11 ಮಂದಿಯ ಬಂಧಿಸಿ ಪಣಕ್ಕಿಟ್ಟಿದ್ದ 1,75,650 ನಗದು, ಮೂರು ದ್ವಿಚಕ್ರ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!