2023ರ ಕರಡು ಮತದಾರರ ಪಟ್ಟಿ ಪ್ರಕಟ: ಡೀಸಿ

3287 ಪುರುಷ, 2234 ಮಹಿಯರು ಸೇರಿ 6061 ಸೇರ್ಪಡೆ

43

Get real time updates directly on you device, subscribe now.


ತುಮಕೂರು: ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2023ರ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 23 ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಕರಡು ಮತದಾರರ ಪಟ್ಟಿ ಪ್ರಚುರ ಪಡಿಸುವಿಕೆ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾಧಿಕಾರಿಗಳ ಕಚೇರಿ, ತುಮಕೂರು ಮಹಾ ನಗರ ಪಾಲಿಕೆ, ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳ ಕಚೇರಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕಚೇರಿ, ತಿಪಟೂರು, ಶಿರಾ ನಗರಸಭೆ, ಎಲ್ಲಾ ಪುರಸಭೆ, ಪಟ್ಟಣ ಪಂಚಾಯತಿ, ಶಿಕ್ಷಣ ಸಂಸ್ಥೆಗಳ ಸೂಚನಾ ಫಲಕದಲ್ಲಿ ಕರಡು ಪಟ್ಟಿ ಪ್ರಕಟಿಸಲಾಗಿರುತ್ತದೆ ಎಂದು ತಿಳಿಸಿದರು.

ಕರ್ನಾಟಕ ವಿಧಾನ ಪರಿಷತ್ ಸದಸ್ಯವೈ.ಎ.ನಾರಾಯಣ ಸ್ವಾಮಿ ಅವರ ಪದಾವಧಿಯು 21-6-2024 ರಂದು ಕೊನೆಗೊಳ್ಳಲಿದ್ದು, ಭಾರತ ಚುನಾವಣಾ ಆಯೋಗದ ಅರ್ಹತಾ ದಿನಾಂಕ 01-11-2023ಕ್ಕೆ ಅನ್ವಯಿಸುವಂತೆ 23-11-2023 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ತಿಳಿಸಿದರು.
ಒಟ್ಟು 3287 ಪುರುಷ, 2234 ಮಹಿಳಾ ಸೇರಿದಂತೆ ಒಟ್ಟು 6061 ಸೇರ್ಪಡೆಗೊಂಡ ಅರ್ಹ ಮತದಾರರಿದ್ದು, 23-11- 2023 ರಂದು ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಗೆ ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 23 ರಿಂದ ಡಿಸೆಂಬರ್ 9 ರೊಳಗಾಗಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ, ತುಮಕೂರು ಆಯುಕ್ತರು, ತುಮಕೂರು ಮಹಾ ನಗರ ಪಾಲಿಕೆ, ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲ್ಲೂಕು ತಹಶೀಲ್ದಾರ್ ಗೆ ಖುದ್ದಾಗಿ ಅಥವಾ ಅಂಚೆ ಮೂಲಕ 9-12-2023 ರೊಳಗಾಗಿ ತಲುಪುವಂತೆ ಆಕ್ಷೇಪಣೆ ಸಲ್ಲಿಸಬಹುದಾಗಿರುತ್ತದೆ.

ಭಾರತದ ಪ್ರಜೆಯಾಗಿರುವ ಮತ್ತು ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು 1ನೇ ನವೆಂಬರ್ 2023ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಕನಿಷ್ಟ ಒಟ್ಟು 3 ವರ್ಷಗಳಷ್ಟು, ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ನಿರ್ದಿಷ್ಟ ಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಭೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ.
ಸ್ವೀಕೃತವಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿಸೆಂಬರ್ 25 ರೊಳಗಾಗಿ ಪರಿಶೀಲಿಸಿ ವಿಲೇ ಪಡಿಸಲಾಗುವುದು, ನಂತರ ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಕುಟುಂಬದ ಸದಸ್ಯರು ಮರಣ ಹೊಂದಿದ್ದಲ್ಲಿ ತಮ್ಮ ವ್ಯಾಪ್ತಿಯ ಬಿಎಲ್ಓಗಳಿಗೆ ನಮೂನೆ 7 ರಲ್ಲಿ ಅರ್ಜಿ ಸಲ್ಲಿಸಿ ಮೃತಪಟ್ಟವರ ಹೆಸರನ್ನು ಸ್ವಯಂ ಪ್ರೇರಿತರಾಗಿ ಮತದಾರರ ಪಟ್ಟಿಯಿಂದ ತೆಗೆಸಬೇಕೆಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಇದ್ದರು.

Get real time updates directly on you device, subscribe now.

Comments are closed.

error: Content is protected !!