ತುಮಕೂರು: ಸೇವಾ ಭದ್ರತೆ ಮತ್ತು ಖಾಯಂಗೆ ಆಗ್ರಹಿಸಿ ರಾಜ್ಯಾದ್ಯಂತ ಕಾಲೇಜು ಬಹಿಷ್ಕರಿಸಿ ಅನಿರ್ಧಾಷ್ಟಾವಧಿ ಧರಣಿಗೆ ಕರೆಕೊಟ್ಟಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ತುಮಕೂರು ಜಿಲ್ಲೆಯ ಎಲ್ಲಾ 20 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಕಾಲೇಜೀನ ಕರ್ತವ್ಯಕ್ಕೆ ತೆರಳದೆ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಾಷ್ಟಾವಧಿ ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ಧರ್ಮವೀರ ತಿಳಿಸಿದ್ದಾರೆ.
ನಗರದ ಗಾಜಿನ ಮನೆಯಲ್ಲಿ ಜಿಲ್ಲೆಯ ಎಲ್ಲಾ ಅತಿಥಿ ಉಪನ್ಯಾಸಕರು ಸಭೆನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿ ನಂತರ ಜಿಲ್ಲಾಧಿಕಾರಿಗಳಿಗೆ ಪತ್ರಿಭಟನೆ ಮನವಿ ಸಲ್ಲಿಸಿ ಮಾತನಾಡಿ, ಜಿಲ್ಲೆಯ ಎಲ್ಲಾ ಅತಿಥಿ ಉಪನ್ಯಾಸಕರು ರಾಜ್ಯ ಸರ್ಕಾರದಿಂದ ಕಾಯಾಮಾತಿ ಮತ್ತು ಸೇವಾ ಭದ್ರತೆಯ ಬಗ್ಗೆ ಲಿಖಿತ ರೂಪದಲ್ಲಿ ಆದೇಶದ ಬರುವವರೆಗೂ ಯಾರೂ ಕಾಲೇಜೀನ ಕರ್ತವ್ಯಕ್ಕೆ ತೆರಳಬಾರದು ಮತ್ತು ನಾಳೆಯಿಂದ ಜಿಲ್ಲೆಯಲ್ಲಿ ನಡೆಯುವ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಕಾಲೇಜು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟ ಅವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಶಿವಣ್ಣ ತಿಮ್ಮಲಾಪುರ ಮಾತನಾಡಿ ರಾಜ್ಯ ಸರ್ಕಾರ ಬೇರೆ, ಬೇರೆ ಇಲಾಖೆಗಳಲ್ಲಿನ ನೌಕರರನ್ನು ಖಾಯಂ ಮಾಡುತ್ತಿದೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಮಾತ್ರ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದೆ, ರಾಜ್ಯ ಸರ್ಕಾರ ಹಲವು ವರ್ಷಗಳಿಂದ ನಮ್ಮ ನ್ಯಾಯ ಸಮ್ಮತ ಬೇಡಿಕೆ ಈಡೇರಿಸಿದೆ ಮೀನಾ ಮೇಷ ಎಣಿಸುತ್ತಿದ್ದು, ಅತಿಥಿ ಉಪನ್ಯಾಸಕರಿಗೆ ಈ ರಾಜ್ಯದಲ್ಲಿ ಯಾವುದೇ ಸರ್ಕಾರ ನ್ಯಾಯ ದೊರಕಿಸಿಕೊಟ್ಟಿಲ್ಲ, ನಮ್ಮ ಪ್ರತಿಭಟನೆ ತೀವ್ರ ರೂಪ ಪಡೆದುಕೊಳ್ಳುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರಾದ ಲೋಕೇಶ್, ಶಶಿಧರ, ಕಾಂತರಾಜು, ಡಾ.ಮಲ್ಲಿಕಾರ್ಜುನ್.ಎಂ.ಟಿ, ಶಂಕರಪ್ಪ ಹಾರೋಗೆರೆ, ಕಂಚಿ ರಾಯಪ್ಪ, ಕೃಷ್ಣೇಗೌಡ, ಡಾ.ಸವಿತಾ, ವೇದಮೂರ್ತಿ, ನರಸಿಂಹರಾಜು, ಡಾ ಕುಮಾರ್.ಸಿ, ರಾಜೇಶ್, ಮಹಾಲಕ್ಷ್ಮಿ, ಶಂಕರಪ್ಪ, ಹನುಮಂತರಾಯ, ಡಾ.ಅಂಜನ ಮೂರ್ತಿ, ಅಂಬಿಕಾ ಸೇರಿದಂತೆ ನೂರಾರು ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.
Comments are closed.