ತಾಯಿಯಂದಲೇ ಮಗಳಿಗೆ ಹಿಂಸೆ- ದೂರು ದಾಖಲು

77

Get real time updates directly on you device, subscribe now.


ಕೊಡಿಗೇನಹಳ್ಳಿ: ಅಪ್ರಾಪ್ತ ಬಾಲಕಿಯನ್ನು ಸ್ವತಃ ತಾಯಿಯೇ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತಿದ್ದಾರೆ ಎಂದು ಮಕ್ಕಳ ಸಹಾಯವಾಣಿಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಇಲಾಖೆಯ ವತಿಯಿಂದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ.
ಮಧುಗಿರಿ ತಾಲ್ಲೂಕಿನ ಐ.ಡಿ.ಹಳ್ಳಿ ಹೋಬಳಿಯ ಚಿಕ್ಕದಾಳವಟ್ಟ ಗ್ರಾಪಂ ವ್ಯಾಪ್ತಿಯ ಓಬಳಾಪುರ ಗ್ರಾಮದಿಂದ ಮಕ್ಕಳ ಸಹಾಯವಾಣಿಗೆ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿಕ್ಕದಾಳವಟ್ಟ ಶಾಲೆಯಿಂದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ತಾಲ್ಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ಪೊಲೀಸರ ಸಹಕಾರದೊಂದಿಗೆ ರಕ್ಷಣೆ ಮಾಡಿದ್ದಾರೆ, ಗ್ರಾಮದ ಹಿರಿಯ ಮುಖಂಡರು ಹಾಗೂ ಅಂಗನವಾಡಿ ಕಾರ್ಯಕರ್ತರ ಸಮಕ್ಷಮದಲ್ಲಿ ಮಹಜರು ಮಾಡಿ ಅಪ್ರಾಪ್ತ ಬಾಲಕಿಯನ್ನು ತಾತ್ಕಾಲಿಕ ಪೋಷಣೆಗೆ ಸರಕಾರಿ ಬಾಲಕಿಯರ ಬಾಲ ಮಂದಿರಕ್ಕೆ ರವಾನೆ ಮಾಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!