ಕಪ್ಪು ಪಟ್ಟಿ ಧರಿಸಿ ಅತಿಥಿ ಉಪನ್ಯಾಸಕರ ಧರಣಿ

60

Get real time updates directly on you device, subscribe now.


ತುಮಕೂರು: ಐದನೇ ದಿನಕ್ಕೆ ಕಾಲಿಟ್ಟ ಅತಿಥಿ ಉಪನ್ಯಾಸಕರ ಧರಣಿ ಕೈಗೆ ಕಪ್ಪು ಪಟ್ಟಿದರಿಸಿ ಕಪ್ಪುಪಟ್ಟಿ ಪ್ರದರ್ಶನದ ಮೂಲಕ ಅತಿಥಿ ಉಪನ್ಯಾಸಕರು ಎಂದು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಯ ಎದುರು ಅನಿರ್ಧಿಷ್ಟಾವಧಿ ಧರಣಿ ಮುಂದುವರೆಸಿರುವ ಅತಿಥಿ ಉಪನ್ಯಾಸಕರು ಕಪ್ಪು ಪಟ್ಟಿ ಪ್ರದರ್ಶನ ಮಾಡುವ ಮೂಲಕ ಸರ್ಕಾರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಜಿಲ್ಲಾಧ್ಯಕ್ಷ ಡಾ.ಧರ್ಮವಿರ ಮಾತನಾಡಿ, ನಾವು ಸಾಂಕೇತಿಕವಾಗಿ ಕಪ್ಪುಪಟ್ಟಿ ಪ್ರದರ್ಶನ ಮಾಡಿದ್ದೇವೆ, ಅಲ್ಲದೆ ನಮ್ಮ ಜಿಲ್ಲೆಯಲ್ಲಿ ಇಬ್ಬರು ಸಚಿವರು, ಇಬ್ಬರು ಎಂಎಲ್ಸಿಗಳಿದ್ದು ಅತಿಥಿ ಉಪನ್ಯಾಸಕರು ಸಮಸ್ಯೆಯನ್ನು ಸರ್ಕಾರಕ್ಕೆ ಗಮನಕ್ಕೆ ತಂದು ಶೀಘ್ರವಾಗಿ ಬಗೆಹರಿಸದಿದ್ದರೆ ಹೋರಾಟ ಉಗ್ರರೂಪ ಪಡೆಯುತ್ತದೆ ಎಂದು ಎಚ್ಚರಿಸಿದರು.

ಅತಿಥಿ ಉಪನ್ಯಾಸಕಿ ಡಾ.ಜಲಜಾಕ್ಷಿ ಮಾತನಾಡಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಮತ್ತು ಮಹಿಳೆಯರಿಗೆ ಹಲವಾರು ಭಾಗ್ಯ ನೀಡುತ್ತಿದ್ದಾರೆ, ಆದರೆ ವಿದ್ಯಾರ್ಥಿಗಳಿಗೆ ಶಿಕ್ಷಣ ಕಲಿಸುವಂತಹ ಅತಿಥಿ ಉಪನ್ಯಾಸಕರಿಗೆ ಖಾಯಂ ಭಾಗ್ಯ ನೀಡಬೇಕೆಂದು ಆಗ್ರಹಿಸಿದರು.
ರಾಜ್ಯದ ಜನತೆಗೆ ನೀಡಿರುವ ಭಾಗ್ಯಗಳಂತೆ ಅತಿಥಿ ಉಪನ್ಯಾಸಕರಿಗೂ ಒಂದು ಭಾಗ್ಯ ನೀಡಿ, ನಮ್ಮ ನ್ಯಾಯಯುತ ಬೇಡಿಕೆಯಾದ ಖಾಯಂ ಮತ್ತು ಸೇವಾ ಭದ್ರತೆ ಮಾಡಬೇಕು, ನಿಮ್ಮ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಅತಿಥಿ ಉಪನ್ಯಾಸಕರಿಗೆ ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.
ಅತಿಥಿ ಉಪನ್ಯಾಸಕ ಡಾ.ಕುಮಾರ್ ಮಾತನಾಡಿ, ಇಂದು ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಅತಿಥಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಜಾಣ ಕುರುಡುರಂತೆ ಪ್ರದರ್ಶಿಸುತ್ತಿರುವುದು ಖಂಡನೀಯ, ದಿನೇ ದಿನೆ ನಮ್ಮ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರುವುದು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದ್ದರೆ ನಮ್ಮ ಹೋರಾಟ ಉಗ್ರರೂಪಕ್ಕೆ ಹೋಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರಾದ ಗಂಗಾಧ ಶಿರಾ, ಡಾ.ಶೇಖರ್, ಶಿವಣ್ಣ, ಡಾ.ಶ್ರೀನಿವಾಸ್, ಶಿವಣ್ಣ ತಿಮ್ಮಲಾಪುರ, ಮಲ್ಲಿಕಾರ್ಜುನ್, ಶಂಕರಪ್ಪ ಹಾರೋಗೆರೆ, ಅಂಬಿಕಾ, ಹರ್ಷಿತ, ಡಾ.ಕವಿತಾ, ಶಿವಯ್ಯ ,ಗಿರೀಶ್, ಸುರೇಶ್, ಅರುಣ್ ಕುಮಾರ್ ಕಾಂತರಾಜ್ ಇದ್ದರು.

Get real time updates directly on you device, subscribe now.

Comments are closed.

error: Content is protected !!