ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಡೀಸಿ

61

Get real time updates directly on you device, subscribe now.

ತುಮಕೂರು: ನಗರದ ಡಿಎಆರ್ ಮೈದಾನದಲ್ಲಿ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ತುಮಕೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು, ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಬಲೂನ್ ಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.
ನಂತರ ಕ್ರೀಡಾಪಟುಗಳಿಂದ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿ, ದಿನದ 24 ಗಂಟೆಯೂ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪೊಲೀಸರ ಒತ್ತಡ ನಿವಾರಣೆಗೆ ಈ ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು.
ಕ್ರೀಡೆ ಪ್ರತಿಯೊಬ್ಬರ ಮನಸ್ಥೈರ್ಯ ಹೆಚ್ಚಿಸುವ ಸಾಧನ. ಮಾನಸಿಕವಾಗಿ ನೆಮ್ಮದಿಯಾಗಿರಲು ಹಾಗೂ ಮನಸ್ಸು ಉಲ್ಲಾಸವಾಗಿರಲು ಕ್ರೀಡಾಕೂಟ ಒಂದು ಉತ್ತಮ ಪ್ರಯತ್ನವಾಗಿದೆ, ಪೊಲೀಸ್ ಇಲಾಖೆಯಲ್ಲಿ ಹಲವು ಒತ್ತಡದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ಮಾಡುತ್ತಾರೆ, ಯಾವಾಗ ಯಾವ ಘಟನೆ ಸಂಭವಿಸುತ್ತದೆ ಎನ್ನುವುದನ್ನು ಯಾರೂ ಊಹಿಸಲು ಸಾಧ್ಯವಿಲ್ಲ, ದಿನದ 24 ಗಂಟೆಯೂ ಸನ್ನದ್ಧರಾಗಿರಬೇಕಾಗುತ್ತದೆ ಎಂದರು.
ಕ್ರೀಡೆಯಲ್ಲಿ ಸೋಲು- ಗೆಲುವು ಸಾಮಾನ್ಯ, ನಿರಂತರವಾಗಿ ಪ್ರಯತ್ನ ಮಾಡಿದರೆ ಗೆಲುವು ಬಂದೇ ಬರುತ್ತದೆ, ಸೋತವರು ಕುಗ್ಗಬಾರದು, ಗೆದ್ದವರು ಹಿಗ್ಗಬಾರದು, ಸ್ನೇಹ ಮನೋಭಾವದಿಂದ ಕ್ರೀಡಾಕೂಟದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ. ಪ್ರಾಸ್ತಾವಿಕ ನುಡಿಗಳನ್ನಾಡಿದರು, ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಉಪ ವಿಭಾಗದ ಪೊಲೀಸ್ ಕ್ರೀಡಾಪಟುಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಕಾರ್ಯಕ್ರಮದಲ್ಲಿ ಅಡಿಷನಲ್ ಎಸ್ಪಿ ವಿ.ಮರಿಯಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಉಪ ವಿಭಾಗಾಗಳ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Get real time updates directly on you device, subscribe now.

Comments are closed.

error: Content is protected !!