ಆರೋಗ್ಯ ಅಭಿಯಾನ ದೇಶಕ್ಕೆ ಮಾದರಿ

ಆರೋಗ್ಯ ತುಮಕೂರು ಅಭಿಯಾನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

93

Get real time updates directly on you device, subscribe now.


ಕೊರಟಗೆರೆ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಆರೋಗ್ಯ ಅಭಿಯಾನ ಕಾರ್ಯಕ್ರಮ ಅನುಷ್ಠಾನಕ್ಕೆ ತರಲು ಯೋಜನೆ ರೂಪಿಸಿಕೊಂಡಿದೆ, ನನಗೆ ತಿಳಿಯದಂತೆ ಸಚಿವ ಪರಮೇಶ್ವ ಅವರು ತಮ್ಮ ಕ್ಷೇತ್ರದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿ ಜನತೆಯ ಆರೋಗ್ಯ ರಕ್ಷಣೆಗೆ ಮುಂದಾಗಿದ್ದು, ಈ ಬೃಹತ್ ಆರೋಗ್ಯ ಅಭಿಯಾನ ದೇಶಕ್ಕೆ ಮಾದರಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ತಿಳಿಸಿದರು.
ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ತಾಲೂಕು ಆರೋಗ್ಯಾಧಿಕಾರಿಗಳು, ಸಾರ್ವಜನಿಕ ಆಸ್ಪತ್ರೆಯಿಂದ ಆರೋಗ್ಯ ತುಮಕೂರು ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕಾಯಿಲೆಯಿಂದ ಬಳಲುತ್ತಾ ಮರಣ ಹೊಂದಿದವರ ಸಂಖೈ ಹೆಚ್ಚುತ್ತಿರುವ ಹಿನ್ನೆಲೆ ಇಂತಹ ಕಾರ್ಯಕ್ರಮ ಜನತೆಯ ಆರೋಗ್ಯ ಕಾಪಾಡುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ, ಹೆಚ್ಚಾಗಿ ಹೃದಯಾಘಾತ, ಕ್ಯಾನ್ಸರ್, ಕಿಡ್ನಿ ಸಮಸ್ಯೆ, ಮಧುಮೇಹ ದಂತಹ ಮಾರಕಾ ಕಾಯಿಲೆಯಿಂದ ಹೆಚ್ಚಾಗಿ ಸಾವನ್ನಪಿದ್ದಾರೆ, ಅದರಲ್ಲೂ ಹೃದಯಘಾತದಿಂದ ಯುವಕರು ಹೆಚ್ಚಾಗಿ ಸಾವನ್ನಪ್ಪಿದ್ದಾರೆ ಎಂದರು.

ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ, 12 ವಿಷಯಗಳ ಕಾಯಿಲೆಯ ಬಗ್ಗೆ ಈ ಕಾರ್ಯಕ್ರಮ ರೂಪಿಸಿದ್ದು ಯಶಸ್ವಿಯಾಗಲಿ, ಡಾ.ಜಿ ಪರಮೇಶ್ವರ್ ತಾಲೂಕಿಗೆ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸೇರಿದಂತೆ ಟ್ರಾಮಾ ಕೇರ್ ಮತ್ತು ಪಿಎಚ್ಸಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸ್ವಾತಂತ್ರ್ಯ ಬಂದ ನಂತರ ಆಡಳಿತ ವ್ಯವಸ್ಥೆಯಲ್ಲಿ ಪಂಚ ವಾರ್ಷಿಕ ಯೋಜನೆಯಲ್ಲಿ ಈ ವ್ಯವಸ್ಥೆ ಮಾಡಿಕೊಂಡರು, ಈ ಯೋಜನೆಯಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಕೈಗಾರಿಗೆ ಮೊದಲಾದವುಗಳಿದ್ದು, ವಿಶ್ವದಲ್ಲಿಯೇ ಶೈಕ್ಷಣಿಕ ಕ್ಷೇತ್ರ 12 ರಷ್ಟು ಮಾತ್ರ ಅಕ್ಷರತೆ ಇತ್ತು, ಈಗ ಶೇ.72 ರಷ್ಟು ಹೆಚ್ಚಿದ್ದು ಪ್ರತಿಯೊಬ್ಬರು ಸ್ವಾವಲಂಬಿಗಳಾಗಿ ಜೀವನ ನಡೆಸುವ ಮಟ್ಟಕ್ಕೆ ದೇಶ ಬೆಳವಣಿಗೆ ಆಗಿದೆ ಎಂದು ಹೇಳಿದರು.

2005 ರಲ್ಲಿ ಡಾ.ಮನಮೋಹನ್ ಸಿಂಗ್ ಇಡೀ ರಾಷ್ಟ್ರಕ್ಕೆ ನ್ಯಾಷನಲ್ ರೂರಲ್ ಹೆಲ್ತ್ ಸೆಂಟರ್ ಪ್ರಾರಂಭಿಸಿದರು, ನಮ್ಮ ದೇಶದಲ್ಲಿ ಆರೋಗ್ಯ ಕ್ಷೇತ್ರ ಅಭಿವೃದ್ಧಿ ಆಗಿರುವ ಕ್ಷೇತ್ರಕ್ಕಿಂತ ಉತ್ತಮವಾಗಿದೆ, ಹೊರ ದೇಶಕ್ಕೆ ಹೋಗಿ ಚಿಕಿತ್ಸೆ ಪಡೆಯುವರು ಈಗ ನಮ್ಮ ದೇಶದಲ್ಲಿಯೇ ಪಡೆಯಬಹುದು, ಕರ್ನಾಟಕದಲ್ಲಿ ಪಬ್ಲಿಕ್ ಹೆಲ್ತ್ ಸೆಂಟರ್ ಸಹಕಾರಿಯಾಗಿದೆ, ರಾಜ್ಯದಲ್ಲಿ ಮೊದಲನೇ ಹಂತದಲ್ಲಿ ಅತಿ ಹೆಚ್ಚು ವೈದ್ಯರನ್ನುಉತ್ಪತ್ತಿ ಮಾಡುತ್ತಿದ್ದೇವೆ ಎಂದು ಹೇಳಿದರು.
ರಾಜ್ಯದ 8 ಜಿಲ್ಲೆಯಲ್ಲಿ ಆರೋಗ್ಯ ಅಭಿಯಾನ ಕಾರ್ಯಕ್ರಮ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿತ್ತು, ಅದರಲ್ಲಿ ತುಮಕೂರು ಜಿಲ್ಲೆ ಕೂಡ ಒಂದು, ಆದ್ದರಿಂದ ಆರೋಗ್ಯ ತುಮಕೂರು ಅಭಿಯಾನವನ್ನು ಕೊರಟಗೆರೆಯಲ್ಲಿ ಆಯೋಜನೆ ಮಾಡಲಾಗಿದೆ, ನಮ್ಮ ಸರ್ಕಾರ ಜನಪರ ಆಡಳಿದೊಂದಿಗೆ ಗ್ಯಾರಂಟಿ ಯೋಜನೆ ಜಾರಿಗೆ ತಂದು ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜ್ಯೋತಿಗಣೇಶ್, ಶಿರಾ ಶಾಸಕ ಟಿ.ಬಿಜಯಚಂದ್ರ, ತುರುವೇಕೆರೆ ಶಾಸಕ ಕೃಷ್ಣಪ್ಪ, ಪಾವಗಡ ಶಾಸಕ ವೆಂಕಟೇಶ್, ಜಿಲ್ಲಾಧಿಕಾರಿ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್, ತಹಶೀಲ್ದಾರ್ ಮಂಜುನಾಥ್, ತಾಪಂ ಇಓ ಅಪೂರ್ವ, ತಾಲೂಕು ಆರೋಗ್ಯಧಿಕಾರಿ ಡಾ.ವಿಜಯ್ ಕುಮಾರ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!