ರೈತರಿಗೆ ಬರ ಪರಿಹಾರ ಹಣ ಬಿಡುಗಡೆ ಮಾಡಿ

91

Get real time updates directly on you device, subscribe now.


ತುಮಕೂರು: ಬರ ಪರಿಸ್ಥಿತಿಯಿಂದ ತತ್ತರಿಸಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿರುವ ರೈತರಿಗೆ ಕೂಡಲೇ ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಆಮ್ ಆದ್ಮಿ ಪಕ್ಷದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಜಯರಾಮಯ್ಯ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ರಾಜ್ಯ ಸರ್ಕಾರ ತುಮಕೂರು ಜಿಲ್ಲೆಯನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದೆ, ಆದರೆ ಇದುವರೆಗೂ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ ಮಾಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸರ್ಕಾರ ಬರ ಪರಿಹಾರವನ್ನು ಅವೈಜ್ಞಾನಿಕವಾಗಿ ನಿಗದಿ ಮಾಡಿದೆ, ರೈತರು ಪ್ರತಿ ಎಕರೆಗೆ ಸಾವಿರಾರು ರೂ. ಖರ್ಚು ಮಾಡಿದ್ದಾರೆ, ಆದರೆ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ರೈತರು ಇನ್ನಷ್ಟು ಸಂಕಷ್ಟಕ್ಕೆ ಸಿಲುವಂತಾಗುತ್ತದೆ, ಈ ಬಗ್ಗೆ ಸರ್ಕಾರ ಗಮನ ಹರಿಸಿ ವೈಜ್ಞಾನಿಕ ಪರಿಹಾರ ನೀಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಕೇವಲ ಬರ ಪರಿಹಾರ ಹಣ ನೀಡುವ ಹೇಳಿಕೆ ನೀಡದೆ ಕೂಡಲೇ ಬರ ಪರಿಹಾರದ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರೈತರೊಂದಿಗೆ ಸೇರಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರಾದ ಜಯರಾಮಯ್ಯ, ಎಂ.ಎಸ್.ಮಧುಸೂಧನ್, ಯೋಗೀಶ್ ಗೌಡ, ಸೈಯದ್ ರುಕ್ಸಾನಾ ಬಾನು, ಮೊಹಮ್ಮದ್ ಗೌಸ್ ಫೀರ್ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!