ಮಕ್ಕಳ ಹಕ್ಕುಗಳನ್ನು ಗೌರವಿಸಿ: ಸತೀಶ್

82

Get real time updates directly on you device, subscribe now.


ಗುಬ್ಬಿ: ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡುವ ಮೂಲಕ ಅವರ ವಿಕಸನ ಮತ್ತು ಭವಿಷ್ಯದ ಬೆಳವಣಿಗೆಗೆ ಪೋಷಕರು ಮತ್ತು ಗ್ರಾಮ ಪಂಚಾಯಿತಿಗಳು ಪೂರಕವಾಗಿ ಕೆಲಸ ಮಾಡಬೇಕಿದೆ, ಮಕ್ಕಳ ಗ್ರಾಮ ಸಭೆ ಮಕ್ಕಳ ವಿಧಾನ ಸಭೆಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ತಿಳಿಸಿದರು.
ತಾಲ್ಲೂಕಿನ ಕಡಬ ಹೋಬಳಿಯ ಬ್ಯಾಡಗೆರೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಮಕ್ಕಳ ಗ್ರಾಮ ಸಭೆ ಮತ್ತು ಮಹಿಳಾ ಗ್ರಾಮ ಸಭೆ ಉದ್ಘಾಟಸಿ ಮಾತನಾಡಿ, ಮಕ್ಕಳ ಹಕ್ಕುಗಳಾದ ಜೀವಿಸುವ ಹಕ್ಕು, ಸಂರಕ್ಷಣೆಯ ಹಕ್ಕು, ವಿಕಾಸ ಹೊಂದುವ ಹಕ್ಕು, ಭಾಗವಹಿಸುವಿಕೆಯ ಹಕ್ಕುಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಾವಲು ಪಡೆ ಉಪ ಸಮಿತಿ ಇದ್ದು ಮಹಿಳೆಯರ ಸಮಸ್ಯೆ ಬಗೆಹರಿಸುವಲ್ಲಿ ಎಲ್ಲರೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದರು.
ಸ್ಥಳೀಯ ಸರ್ಕಾರ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಗಳಿಗೆ ದೊಡ್ಡ ಶಕ್ತಿ ಇದ್ದು ಇಲ್ಲಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಯಾರು ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಇಓ ಪರಮೇಶ್ ಕುಮಾರ್ ಮಾತನಾಡಿ, ಮಕ್ಕಳು ದೇಶದ ಮುಂದಿನ ಪ್ರಜೆಯಾಗಿದ್ದು, ಮಕ್ಕಳಿಗೆ ಶಿಕ್ಷಣ ಮತ್ತು ಉತ್ತಮ ಆರೋಗ್ಯ ನೀಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳು ಕೆಲಸ ಮಾಡಬೇಕು, ದೇಶ ಅಭಿವೃದ್ಧಿ ಪಥದತ್ತ ಸಾಗುತ್ತದೆ ಎಂದು ತಿಳಿಸಿದರು.

ಪಿಡಿಒ ಕಲಾ ಮಾತನಾಡಿ ಬ್ಯಾಡಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 11 ಸರ್ಕಾರಿ ಶಾಲೆಗಳಿದ್ದು, 380 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ, ಅವರೆಲ್ಲರಿಗೂ ಗ್ರಾಮ ಪಂಚಾಯತಿಯಿಂದ ಸಮವಸ್ತ್ರ, ಟ್ರಾಕ್ ಸೂಟ್ ವಿತರಿಸುತ್ತಿದ್ದು ಇದರ ಸೌಲಭ್ಯ ಪಡೆದು ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಯಾಸ ಮಾಡಿ ಗ್ರಾಪಂಗೆ ಕೀರ್ತಿ ತರಬೇಕೆಂದು ಎಂದು ತಿಳಿಸಿದರು.
ಗ್ರಾಪಂ ಸದಸ್ಯ ನಂದೀಶ್ ಮಾತನಾಡಿ ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು, ಸರ್ಕಾರಿ ಶಾಲೆಯಲ್ಲಿ ನುರಿತ ಶಿಕ್ಷಕರಿದ್ದು ಉತ್ತಮ ಶಿಕ್ಷಣ ದೊರೆಯುತ್ತದೆ ಎಂದು ತಿಳಿಸಿದರು.

ಮಕ್ಕಳ ಕಲಿಕಾ ಸಾಮರ್ಥ್ಯ ಮತ್ತು ಸಾಧನೆ ಆಧಾರಿಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಲೆಗಳಿಗೆ ಪ್ರಥಮ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಈ ಸಂದರ್ಭಲ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷೆ, ಲತಾ, ಸದಸ್ಯರಾದ ವರದರಾಜ್, ಶಿವಕುಮಾರಸ್ವಾಮಿ, ಬ್ಯಾಟರಾಜು, ನಂದೀಶ್, ‘ನಂಜಯ್, ಮಂಜುಳಾ, ರಾಜಣ್ಣ, ಜಮೀಲಾ ಬಾನು, ಪೌಜಿಯಾ, ಗೀತಾ, ಶರ್ತಾಜ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಗಂಗಾಧರ್, ಸಿಆರ್ಪಿ ರಾಮಚಂದ್ರ, ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಮಕ್ಕಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!