ಮಹಿಳೆಯರ ರಕ್ಷಣೆ ನಮ್ಮೆಲ್ಲರ ಹೊಣೆ

67

Get real time updates directly on you device, subscribe now.


ತುಮಕೂರು: ಕೌಟುಂಬಿಕ ಹಿಂಸೆಯಿಂದ ಮಹಿಳೆಯರನ್ನು ರಕ್ಷಣೆ ಮಾಡುವುದು ತಮ್ಮ ತಮ್ಮ ಮನೆಗಳಿಂದಲೇ ಪ್ರಾರಂಭಿಸಬೇಕು, ಕಾಯ್ದೆ ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರುವ ಅಧಿಕಾರಿಗಳು ಕಾಯ್ದೆಯ ಸೂಕ್ಷ್ಮತೆ ಅರಿತುಕೊಳ್ಳುವುದು ಅಗತ್ಯವಾಗಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷ ಜಯಂತ್ ಕುಮಾರ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಅನುಷ್ಠಾನ ಭಾಗಿದಾರ ಇಲಾಖೆಗಳ ಪಾತ್ರ ಕುರಿತ 2 ದಿನಗಳ ಓರಿಯೆಂಟೇಷನ್ ತರಬೇತಿ ಉದ್ಘಾಟಿಸಿ ಮಾತನಾಡಿ, ಲೋಕ್ ಅದಾಲತ್ ನಲ್ಲಿ 20 ಪತಿ- ಪತ್ನಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿರುತ್ತದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸದಸ್ಯ ಕಾರ್ಯದರ್ಶಿ ನೂರುನ್ನೀಸ ಮಾತನಾಡಿ, ನ್ಯಾಯಾಲಯದ ಆದೇಶಗಳ ಅನುಷ್ಠಾನ ಹಾಗೂ ದಂಡಾಧಿಕಾರಿಗಳೊಂದಿಗೆ ಸಮನ್ವಯ, ಇ-ಕೋರ್ಟ್ ಪೋರ್ಟಲ್ ಬಗ್ಗೆ ಹಾಗೂ ಕೌಟುಂಬಿಕ ದೌರ್ಜನ್ಯ ತಡೆಕಾಯ್ದೆಯಲ್ಲಿ ನ್ಯಾಯಾಲಯದ ಪಾತ್ರದ ಬಗ್ಗೆ ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಮಾತನಾಡಿ, ಈಗಿನ ಕಾಲದಲ್ಲಿ ಎಲ್ಲಾ ಹೆಣ್ಣು ಮಕ್ಕಳಿಗೂ ಉತ್ತಮ ಮಟ್ಟದ ವಿದ್ಯಾಭ್ಯಾಸ ದೊರೆಯುತ್ತಿದ್ದು, ಕಾನೂನು ಕಾಯ್ದೆಗಳ ಬಗ್ಗೆ ಹೆಚ್ಚಿನ ಜ್ಞಾನ ಇರುತ್ತದೆ, ಹಾಗಾಗಿ ಕೌಟುಂಬಿಕವಾಗಿ ದೌರ್ಜನ್ಯ ಉಂಟಾದಲ್ಲಿ ನ್ಯಾಯ ಯುತವಾಗಿ ಪರಿಹಾರ ಒದಗಿಸಿಕೊಡಲು ಭಾಗಿದಾರ ಇಲಾಖೆಗಳು ಶ್ರಮಿಸಬೇಕು ಹಾಗೂ ಪರಿವರ್ತನೆಯನ್ನು ಕಾರ್ಯಾಗಾರದಲ್ಲಿ ಹಾಜರಿರುವ ನಮ್ಮ ನಿಮ್ಮಂದಲೇ ಪ್ರಾರಂಭಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ.ಎಂ.ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಂರಕ್ಷಣಾಧಿಕಾರಿಗಳು, ನ್ಯಾಯಾಂಗ ಇಲಾಖಾ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ, ಪೊಲೀಸ್ ಇಲಾಖೆಯ ಸಿಬ್ಬಂದಿ, ಸಾಂತ್ವನ ಕೇಂದ್ರ ಮತ್ತು ಸಖಿ-ಒನ್ ಸ್ಟಾಪ್ ಸೆಂಟರ್ ಸಿಬ್ಬಂದಿ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!