ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ

35

Get real time updates directly on you device, subscribe now.


ತುಮಕೂರು: ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಕಾಮಗಾರಿಯನ್ನು ಜನವರಿ 2024 ರೊಳಗಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಹಾಗೂ ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.
ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಜನವರಿ 2024 ರೊಳಗಾಗಿ ಸಂಪೂರ್ಣವಾಗಿ ಎಲ್ಲಾ ರೀತಿಯಲ್ಲಿ ಪೂರ್ಣಗೊಳಿಸುವಂತೆ ಸಿಬ್ಬಂದಿಗೆ ಸೂಚಿಸಿದರು.
ಅಂತೆಯೇ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಅಮಾನಿಕೆರೆಯ ಗಾಜಿನ ಮನೆ ಆವರಣದ ಸುತ್ತಮುತ್ತಲಿನ ಖಾಲಿ ಪ್ರದೇಶ ಅಭಿವೃದ್ಧಿಪಡಿಸುವ ಕಾಮಗಾರಿ ಕೈಗೊಳ್ಳುತ್ತಿದ್ದು, ಇದನ್ನೂ ಸಹ ಜಿಲ್ಲಾಧಿಕಾರಿ ಪರಿಶೀಲಿಸಿದರು.
ತದನಂತರ ಗಂಗಸಂದ್ರ ಕೆರೆಯಲ್ಲಿನ ಆವರಣದಲ್ಲಿ ಉದ್ಯಾನವನ ನಿರ್ಮಾಣ ಮಾಡಲು ಕಾಮಗಾರಿ ಕೈಗೊಂಡಿದ್ದು, ಇದನ್ನೂ ಸಹ ಜಿಲ್ಲಾಧಿಕಾರಿ ಪರಿಶೀಲಿಸಿದರು.
ಈ ಸಂದರ್ಭ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಬಿ.ವಿ.ಅಶ್ವಿಜ, ಇತರ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!