ರಸ್ತೆ ಒತ್ತುವರಿ ತೆರವುಗೊಳಿಸಲು ಆಗ್ರಹ

31

Get real time updates directly on you device, subscribe now.


ಕುಣಿಗಲ್: ಶಿಳ್ಳೆಕ್ಯಾತ ಅಲೆಮಾರಿ ಜನಾಂಗದ ಎರಡು ಮನೆಯವರಿಗೆ ಹೋಗಲು ಇದ್ದ ರಸ್ತೆಯನ್ನು ಕೆಲ ಪ್ರಭಾವಿಗಳು ಮುಚ್ಚಿದ್ದು, ರಸ್ತೆ ಒತ್ತುವರಿ ತೆರವುಗೊಳಿಸಿ, ಸಮರ್ಪಕ ಸಂಚಾರ ವ್ಯವಸ್ಥೆ ಮಾಡುವಂತೆ ಜನಾಂಗದವರು ಆಗ್ರಹಿಸಿದ್ದಾರೆ.

ತಾಲೂಕಿನ ಸಂತೇಮಾವತ್ತೂರು ಗ್ರಾಮ ಪಂಚಾಯಿತಿಯ ಹೆಗ್ಗಡತಿಹಳ್ಳಿ ಗ್ರಾಮದಲ್ಲಿ ಶಿಳ್ಳೆಕ್ಯಾತ ಜನಾಂಗಕ್ಕೆ ಸೇರಿದ ಅಲೆಮಾರಿ ಜನಾಂಗದ ಎರಡು ಕುಟುಂಬಗಳಿದ್ದು ಕಳೆದ ಹಲವಾರು ವರ್ಷಗಳಿಂದ ಗ್ರಾಮದ ರಸ್ತೆ ಬಳಸುತ್ತಿದ್ದರು, ಇತ್ತೀಚೆಗೆ ಸದರಿ ರಸ್ತೆ ತಮಗೆ ಸೇರಿದೆ ಎಂದು ಗ್ರಾಮದ ಪ್ರಭಾವಿ ವ್ಯಕ್ತಿಯೊಬ್ಬರು ರಸ್ತೆಗೆ ಅಡ್ಡಲಾಗಿ ಕಲ್ಲುಗಳಿನಿಟ್ಟು, ಅರ್ಧ ರಸ್ತೆಗೆ ತಗಡಿನ ಶೀಟು ಹಾಕಿದ್ದು, ಅಲೆಮಾರಿ ಜನಾಂಗದವರು ತಮ್ಮ ಮನೆಗೆ ತಿರುಗಾಡಲು ತೊಂದರೆಯಾದ ಹಿನ್ನೆಲೆಯಲ್ಲಿ , ರಸ್ತೆ ಒತ್ತುವರಿ ತೆರವುಗೊಳಿಸಿ ರಸ್ತೆಯಲ್ಲಿ ಹಾಕಿರುವ ತಗಡು ತೆರವುಗೊಳಿಸುವಂತೆ ವಿವಿಧ ಸಂಘಟನೆಗಳು ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳಿಗೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ತಾಪಂ ಇಒ ಜೋಸೆಫ್ ಸ್ಥಳಕ್ಕೆ ತೆರಳಿ ಪರಿಶೀಲಿಸುವ ವೇಳೆ ಗ್ರಾಮದ ಕೆಲವರು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖಾಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಬಾಧಿತ ಕುಟುಂಬದವರು ಆಗ್ರಹಿಸಿದ್ದು, ಅಧಿಕಾರಿಗಳು ಪೂರಕ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!