ಬಿಜೆಪಿ ಪಕ್ಷಕ್ಕೆ ಯುವ ಜನತೆಯನ್ನು ಸೆಳೆಯಿರಿ: ಪ್ರೇಮ ನಾಗಯ್ಯ

263

Get real time updates directly on you device, subscribe now.

ತುಮಕೂರು: ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾಗೆ ಹೆಚ್ಚು ಯುವ ಜನರನ್ನು ಸೆಳೆಯುವ ನಿಟ್ಟಿನಲ್ಲಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ಕೆಲಸ ಮಾಡಬೇಕಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಪ್ರೇಮಾ ನಾಗಯ್ಯ ತಿಳಿಸಿದ್ದಾರೆ.
ನಗರದ ವಿಘ್ನೇಶ್ವರ ಕಂರ್ಪಟ್ನಲ್ಲಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿ, ಹಿಂದುಳಿದ ವರ್ಗಕ್ಕೆ ಸೇರಿದ ನರೇಂದ್ರಮೋದಿ ಅವರು ದೇಶದ ಪ್ರದಾನಿಯಾಗಿದ್ದಾರೆ, ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಬೂತ್ಗೆ 10 ಜನರಂತೆ ಹಿಂದುಳಿದ ವರ್ಗದ ಯುವ ಜನರು ಬಿಜೆಪಿ ಪಕ್ಷಕ್ಕೆ ದುಡಿಯುವಂತೆ ಮಾಡಿ, ನಮ್ಮ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಬೇಕಾಗಿದೆ ಎಂದರು.
ಬಿಜೆಪಿ ಶಿಸ್ತಿನ ಪಕ್ಷ, ಅದರಲ್ಲಿಯೂ ತುಮಕೂರು ಜಿಲ್ಲೆಯ ಒಬಿಸಿ ಮೋರ್ಚಾದ ಬಗ್ಗೆ ರಾಜ್ಯದಲ್ಲಿಯೇ ಒಳ್ಳೆಯ ಹೆಸರಿದೆ, ಆದ್ದರಿಂದ ಮೋರ್ಚಾದ ಅಧ್ಯಕ್ಷ ಶಂಕರಪ್ಪ ಅವರು ತಮ್ಮ ಹಿರಿತನವನ್ನು ಉಪಯೋಗಿಸಿಕೊಂಡು ಜಿಲ್ಲೆಯಲ್ಲಿ ಹಿಂದುಳಿದವರನ್ನು ಸಂಘಟಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಹೆಚ್ಚಿನ ಸದಸ್ಯರು ಗೆಲುವು ಪಡೆಯುವಂತೆ ಮಾಡಬೇಕೆಂದು ಪ್ರೇಮ ನಾಗಯ್ಯ ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಶಂಕರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಒಬಿಸಿ ಮೋರ್ಚಾವನ್ನು ಸದೃಢವಾಗಿ ಕಟ್ಟಿ ಸಮಾಜದ ಮುಖ್ಯವಾಹಿನಿಗೆ ತಂದು ರಾಜಕೀಯ ಅಧಿಕಾರ ಪಡೆಯುವ ನಿಟ್ಟಿನಲ್ಲಿ ಈ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದೆ, ರಾಜ್ಯದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ಸುಮಾರು 812 ಜಾತಿ, ಪಂಗಡ, ಉಪ ಪಂಗಡಗಳಿದ್ದು, ಇವುಗಳನ್ನು ಬಿಜೆಪಿ ಪಕ್ಷದ ಅಡಿಯಲ್ಲಿ ತಂದು ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಪಕ್ಷದ ಹಿರಿಯ ಮುಖಂಡರ ಸಲಹೆಯಂತೆ ಕಾರ್ಯ ನಿರ್ವಹಿಸಲಾಗುತ್ತಿದೆ, ಮುಂಬರುವ ಜಿಪಂ, ತಾಪಂ ಚುನಾವಣೆಗಳಲ್ಲಿಯೂ ಒಬಿಸಿ ಮೋರ್ಚಾದ ಸದಸ್ಯರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದು ಕೊಂಡಿದೆ ಎಂದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಎಂ.ಬಿ.ನಂದೀಶ್, ರಾಜ್ಯ ಒಬಿಸಿ ಕಾರ್ಯಕಾರಿಣಿ ಸದಸ್ಯ ರುದ್ರೇಶ್, ದಾವಣಗೆರೆ ವಿಭಾಗದ ಲಕ್ಷ್ಮೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪಿಗೆ ಶ್ರೀಧರ್, ರವಿಹೆಬ್ಬಾಕ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇದಮೂರ್ತಿ, ಗೋಕಲ್ ಮಂಜುನಾಥ್ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!