ಕಟ್ಟುನಿಟ್ಟಿನ ನೈಟ್ ಕರ್ಫ್ಯೂಗೆ ಅಧಿಕಾರಿಗಳಿಗೆ ಸೂಚನೆ

233

Get real time updates directly on you device, subscribe now.

ತುಮಕೂರು: ಕೊರೊನಾ ಮಹಾಮಾರಿಯ ಹಿನ್ನೆಲೆಯಲ್ಲಿ ಸರಕಾರಿ ತುಮಕೂರು ನಗರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಿದ್ದು, ಇದನ್ನು ಕಟ್ಟು ನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಸರಕಾರ ಪ್ರಧಾನ ಕಾರ್ಯದರ್ಶಿಗಳ ನಿರ್ದೇಶನದಂತೆ ಸ್ಥಾಪಿಸಿರುವ 10 ಚೆಕ್ಪೋಸ್ಟ್ ಗಳಲ್ಲಿ ನಿಗಾವಣೆ ವಹಿಸುವ ಬಗ್ಗೆ ನೇಮಕವಾಗಿರುವ ಅಧಿಕಾರಿಗಳಿಗೆ ನಗರ ಡಿವೈಎಸ್ಪಿ ಶ್ರೀನಿವಾಸ್ ನಿರ್ದೇಶನ ನೀಡಿದರು.
ನಗರದ ಡಿವೈಎಸ್ಪಿ ಕಚೇರಿಯಲ್ಲಿ ನಡೆದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ರಾತ್ರಿ 10 ರಿಂದ ಬೆಳಗ್ಗೆ 5ರ ವರೆಗೆ ತುರ್ತು ವಾಹನಗಳನ್ನು ಹೊರತು ಪಡಿಸಿ, ಉಳಿದ ವಾಹನಗಳು ನಗರದಲ್ಲಿ ಪ್ರವೇಶಿಸಲು ಅವಕಾಶವಿಲ್ಲ. ಸಿನಿಮಾ ಮಂದಿರ, ಮಾಲ್ ಸೇರಿದಂತೆ ವ್ಯಾಪಾರ ವಹಿವಾಟು ರಾತ್ರಿ 10ಕ್ಕೆ ಬಂದ್ ಆಗಬೇಕು, ಈಗಾಗಲೇ ಜಿಲ್ಲಾಧಿಕಾರಿಗಳು ಸಭೆ, ಸಮಾರಂಭ, ಜಾತ್ರೆಗಳ ಬಗ್ಗೆ ನಿಯಮ ರೂಪಿಸಿ ಆದೇಶ ನೀಡಿದ್ದಾರೆ, ಅಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ವರಿಷ್ಠಾಧಿಕಾರಿಗಳು ಸೂಚನೆ ನೀಡಿದ್ದು, ಅವರ ಆದೇಶವನ್ನು ನಾವೆಲ್ಲರೂ ಪಾಲಿಸಬೇಕಾಗಿದೆ ಎಂದರು.
ರಾತ್ರಿ ರೈಲುಗಳಲ್ಲಿ ಬೇರೆ ಊರುಗಳಿಂದ ಬರುವ ಜನರನ್ನು ಕೂಲಂಕಷವಾಗಿ ತಪಾಸಣೆ ಮಾಡಿ, ರೈಲ್ವೆ ಟಿಕೆಟ್ ಪರಿಶೀಲಿಸಬೇಕು, ಅನಗತ್ಯವಾಗಿ ಓಡಾಡಿದರೆ ಸರಕಾರದ ನಿಯಮದ ಪ್ರಕಾರ ವಾಹನ ಸೀಜ್ ಮಾಡಿ ಕೇಸು ದಾಖಲಿಸಬೇಕು, ಹಾಗೆಯೇ ಚರ್ಚ್, ಪ್ರಾರ್ಥನಾ ಮಂದಿರಗಳ, ದೇವಾಲಯಗಳು ರಾತ್ರಿ 9ಕ್ಕೆ ಮುಚ್ಚುವಂತೆ ನೋಡಿಕೊಳ್ಳಲು ಸ್ಪಷ್ಟ ನಿರ್ದೇಶನ ನೀಡಿದರು.

Get real time updates directly on you device, subscribe now.

Comments are closed.

error: Content is protected !!