8 ಅಂಗಡಿ ಬೀಗ ಹೊಡೆದು ಕಳ್ಳತನ

51

Get real time updates directly on you device, subscribe now.


ಕೊರಟಗೆರೆ: ತಾಲೂಕಿನ ಕೋಳಾಲ ಹೋಬಳಿಯ ಇರಕಸಂದ್ರ ಕಾಲೋನಿಯಲ್ಲಿ ಒಂದೇ ದಿನ ಎಂಟು ಅಂಗಡಿಗಳಲ್ಲಿ ಕಳ್ಳತನವಾಗಿರುವ ಘಟನೆ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊರಟಗೆರೆ ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿರುವ ಇರಕಸಂದ್ರ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಸುಮಾರು 8 ಅಂಗಡಿಯ ಬೀಗ ಹೊಡೆದು ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ನಗದು ಸೇರಿದಂತೆ ಇನ್ನಿತರ ವಸ್ತುಗಳನ್ನ ತೆಗೆದುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ, ಈ ಭಾಗದಲ್ಲಿ ಪದೇ ಪದೆ ಕಳ್ಳತನ ನಡೆಯುತ್ತಿದ್ದರೂ ಪೊಲೀಸ್ ಅಧಿಕಾರಿಗಳು ಕಳ್ಳತನ ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ದೂರಿದರು.
ಸ್ಥಳಕ್ಕೆ ಕೋಳಾಲ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ, ಈ ಸಂಬಂಧ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!