ಅಪರಿಚಿತ ವ್ಯಕ್ತಿ ಶವ ಪತ್ತೆ

47

Get real time updates directly on you device, subscribe now.


ಕೊರಟಗೆರೆ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತಾಲ್ಲೂಕಿನ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.
ತಾಲೂಕಿನ ಕೋಳಾಲ ಹೋಬಳಿಯ ನೀಲಗೊಂಡನಹಳ್ಳಿ ಗ್ರಾಪಂನ ಸಂಕೇನಹಳ್ಳಿ ಗೇಟ್ ಸಮೀಪ ಇರುವ ನೀರಿನ ಕಾಲುವೆಯಲ್ಲಿ ಸುಮಾರು 45 ವರ್ಷದ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ, ಕಳೆದ ಕೆಲವು ದಿನಗಳ ಹಿಂದೆ ದೇವಸ್ಥಾನ ಸೇರಿದಂತೆ ಇನ್ನಿತರ ಜಾಗಗಳಲ್ಲಿ ಭೆಕ್ಷೆ ಬೇಡುತ್ತಿದ್ದ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಈ ವ್ಯಕ್ತಿ 5.3 ಎತ್ತರ, ಕಪ್ಪು ಮೈ ಬಣ್ಣ, ನೀಲಿ ಬಣ್ಣದ ಲುಂಗಿ, ಸಿಮೇಂಟ್ ಬಣ್ಣದ ಟೀ ಶರ್ಟ್ ಧರಿಸಿದ್ದಾನೆ, ಯಾರಿಗಾದರೂ ಈ ವ್ಯಕ್ತಿಯ ಗುರುತಿದ್ದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸತಕ್ಕದ್ದು ಅಥವಾ ಕೋಳಾಲ ಪೊಲೀಸ್ ಠಾಣೆಗೆ ತಿಳಿಸಬಹುದಾಗಿದೆ, ಸ್ಥಳಕ್ಕೆ ಕೋಳಾಲ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!