ಪ್ರಜಾಪ್ರಭುತ್ವಕ್ಕೆ ದೊಡ್ಡ ಆತಂಕ ಎದುರಾಗಿದೆ

ಶಾಂತಿಯ ಕಾಲದಲ್ಲಿ ಕ್ರಾಂತಿಯ ಮಾತು ಸಾಹಿತ್ಯವಲ್ಲ: ಸಿದ್ದರಾಮಯ್ಯ

29

Get real time updates directly on you device, subscribe now.


ತುಮಕೂರು: ಪ್ರಜಾಪ್ರಭುತ್ವ ಇಂದು ಅತ್ಯಂತ ಬಿಕ್ಕಟ್ಟು ಎದುರಿಸುತ್ತಿದ್ದು, ಸಾಹಿತಿಗಳು ತಮ್ಮ ಜವಾಬ್ದಾರಿ ಮರೆತು ಮೌನಕ್ಕೆ ಶರಣಾಗಿ ಅವರು ಏನೇ ಬರೆದರೂ ಅದು ಬೂಸಾ ಸಾಹಿತ್ಯವಾಗಲಿದೆ ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ನಗರದ ಗಾಜಿನಮನೆಯ ಶಿಕ್ಷಣ ಭೀಷ್ಮ ಹೆಚ್.ಎಂ.ಗಂಗಾಧರಯ್ಯ ವೇದಿಕೆಯಲ್ಲಿ ಜಿಲ್ಲಾ ಕಸಾಪ ಆಯೋಜಿಸಿದ್ದ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಜನರ ಸಮಸ್ಯೆಗಳಿಗೆ ಧ್ವನಿಯಾಗದ ಸಾಹಿತ್ಯ ಬೂಸಾ ಎಂಬ ದಿ.ಬಿ.ಬಸವಲಿಂಗಪ್ಪ ಅವರ ಹೇಳಿಕೆ ಪ್ರಸ್ತಾಪಿಸಿದ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಸಾಹಿತಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುವುದು ನಮಗೆ ದೊರೆತ ಜವಾಬ್ದಾರಿಯಿಂದ ನುಣುಚಿಕೊಂಡಂತೆ, ಈ ಬಗ್ಗೆ ಎಲ್ಲಾ ಸಾಹಿತಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.

ಕನ್ನಡ ಸಾಹಿತ್ಯವನ್ನು ನಾನು ಕಾಯ ಚರಿತ, ಅಕಾಯ ಚರಿತ ಹಾಗೂ ಕಾಯಕ ಚರಿತರು ಎಂದು ವಿಂಗಡಿಸುಸ್ತೇನೆ, ಕಾಯ ಚರಿತರಿಗಿಂತ ಯಾವುದೇ ಸ್ವಾರ್ಥವಿಲ್ಲದೆ ಸಾಮೂಹಿಕ ಹಿತವನ್ನೇ ಗುರಿಯಾಗಿಸಿಕೊಂಡು ರಚಿತವಾದ ಅಕಾಯ ಚರಿತರ (ಜನಪದರ) ಸಾಹಿತ್ಯ, ವ್ಯಕ್ತಿ ಪ್ರಜ್ಞೆಗಿಂತ ಸಾಮೂಹಿಕ ಪ್ರಜ್ಞೆಗೆ ಹೆಚ್ಚು ಒತ್ತು ನೀಡಿದೆ, ಸಮುದಾಯದ ಧ್ವನಿಗಳಾಗಿವೆ, ಅಲ್ಲಮರ ಅನುಭವ ಮಂಟಪದಲ್ಲಿದ್ದ ಕಾಯಕ ಚರಿತರು ರಚಿಸಿರುವ ವಚನ ಸಾಹಿತ್ಯ, ಚಾತುರ್ವಣದ ವಿರುದ್ಧ ಸಾರಿಸ ಸಮರ ವಿಶ್ವಮಾನವ ಪಜ್ಞೆಗೆ ಪೂರಕವಾಗಿದೆ, ಸಾಹಿತಿಗಳು ಉತ್ವರದಾಯಿತ್ವ ಮತ್ತು ಸಾಮಾಜಿಕ ಹೊಣೆಗಾರಿಕೆ ಪ್ರದರ್ಶಿಸಿವೆ ಎಂದು ನುಡಿದರು.

ಶಾಂತಿಯ ಕಾಲದಲ್ಲಿ ಕ್ರಾಂತಿಯ ಮಾತುಗಳನ್ನಾಡುವುದು ಸಾಹಿತ್ಯವಲ್ಲ, ನಿಜವಾಗಿಯೂ ಕ್ರಾಂತಿಯ ಕಾಲದಲ್ಲಿ ಮೌನಕ್ಕೆ ಶರಣಾಗುವುದು ಸಲ್ಲದು ಎಂದ ಅವರು ಪ್ರಜಾಪ್ರಭುತ್ವಕ್ಕೆ ದೊಡ್ಡ ಆತಂಕ ಎದುರಾಗಿರುವ ಈ ಕಾಲದಲ್ಲಿ ಸಾಹಿತಿಗಳು ಬರೆದಂತೆ ಬದುಕಬೇಕಾಗಿದೆ, ಸಾಹಿತ್ಯ ಸಮ್ಮೇಳನಗಳು ಇಂತಹ ಪ್ರಜ್ಞೆ ಮೂಡಿಸಬೇಕಿದೆ, ರಾಜಪ್ರಭುತ್ವದ ಕಾಲದಲ್ಲಿಯೂ ಪ್ರಜಾ ಪ್ರಭುತ್ವದ ಆಶಯಗಳನ್ನು ಜಾರಿ ಮಾಡಿ ಸಾಹಿತ್ಯ ಪರಿಷತ್ ಕಟ್ಟಿ, ಅದನ್ನು ಸ್ವಾಯತ್ತ ಸಂಸ್ಥೆಯನ್ನಾಗಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಆಶಯ ಈಡೇರಬೇಕೆಂದರೆ ಸಾಹಿತ್ಯ ಆಸ್ಥಾನಗಳಲ್ಲಿ ಪುಂಗಿ ಊದುವ ಬದಲು, ಜನ ಸಾಮಾನ್ಯರ ಹೃದಯದಲ್ಲಿ ಮನೆ ಮಾಡುವಂತಹ ಕೆಲಸ ಆಗಬೇಕಿದೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗೆ ಇಂತಹ ವೇದಿಕೆಗಳು ಬಳಕೆಯಾಗಲಿ ಎಂಬ ಆಶಯ ವ್ಯಕ್ತಪಡಿಸಿದರು.
ಸಮ್ಮೇಳನದ ಸ್ಮರಣ ಸಂಚಿಕೆ ಕಲ್ಪ ಸೌರಭ ಬಿಡುಗಡೆ ಮಾಡಿದ ಜಿಪಂ ಸಿಇಓ ಜಿ.ಪ್ರಭು ಮಾತನಾಡಿ, ವಿಜ್ಞಾನ ತಂತ್ರಜ್ಞಾನ ಎಲ್ಲರಿಗೂ ಶಿಕ್ಷಣ ಇಲ್ಲದ ಕಾಲದಲ್ಲಿಯೂ ಕನ್ನಡ ಭಾಷೆ ಸಾವಿರಾರು ವರ್ಷಗಳಿಂದ ಕನ್ನಡಿಗರಿಗೆ ನೆಲೆ ಒದಗಿಸಿದೆ, ಆದರೆ ಎಲ್ಲರಿಗೂ ಜ್ಞಾನ ದೊರೆತ ನಂತರ ಕನ್ನಡ ಉಳಿಸಬೇಕೆಂಬ ಪ್ರಯತ್ನ ನಡೆದಿದೆ, ಆಧುನಿಕತೆ ಮತ್ತು ದುಡಿಮೆಯ ಭರಾಟೆಯಲ್ಲಿ ಎಲ್ಲರೂ ವಿಜ್ಞಾನ, ತಂತ್ರಜ್ಞಾನದತ್ತ ಹೊರಳಿ ವ್ಯಕ್ತಿತ್ವ ವಿಕಸನಕ್ಕೆ ಮೂಲವಾದ ಸಾಹಿತ್ಯ ಮೂಲೆ ಗುಂಪಾಗಿದೆ, ಭಾಷೆ ಮನುಷ್ಯನ ಹೃದಯವಿದ್ದಂತೆ, ಹಾಗಾಗಿ ಇಂತಹ ಸಮ್ಮೇಳನಗಳು ಪ್ರತಿ ಹಳ್ಳಿ, ಗ್ರಾಪಂ ವ್ಯಾಪ್ತಿಗಳಲ್ಲಿಯೂ ನಡೆಯುವಂತೆ ಸಾಹಿತ್ಯ ಪರಿಷತ್ ಕ್ರಮ ಕೈಗೊಂಡಲ್ಲಿ ಜಿಲ್ಲಾಡಳಿತ ಸಹಕಾರ ನೀಡಲಿದೆ ಎಂದರು.

ತುಮಕೂರು ಜಿಲ್ಲಾ 15ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಹೆಚ್.ಎಸ್.ಶಿವಪ್ರಕಾಶ್ ಮಾತನಾಡಿ, ಜಾಗತೀಕರಣದ ಫಲವಾಗಿ ಇಡೀ ವಿಶ್ವವೇ ಒಂದು ಮಾರುಕಟ್ಟೆಯಾಗಿ ರೂಪಗೊಂಡು ಲಾಭವೇ ಮುಖ್ಯವಾಗಿರುವ ಇಂದಿನ ದಿನದಲ್ಲಿ ಪ್ರಾದೇಶಿಕತೆ ಎಂಬುದು ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ, ಪ್ರಜಾಪ್ರಭುತ್ವದ ಅಡಿಯಲ್ಲಿಯೇ ಜಾಗತೀಕರಣ ವಿಸ್ತರಣೆ ಗೊಳ್ಳುತ್ತಿದ್ದು, ಸರ್ವಾಧಿಕಾರಿ ಧೋರಣೆ, ಬಹುರಾಷ್ಟ್ರೀಯ ದಬ್ಬಾಳಿಕೆಯಿಂದ ಸಂಸ್ಕೃತಿ, ಸ್ಥಳೀಯ ಭಾಷೆಗಳಿಗೆ ಕುತ್ತುಂಟಾಗಿದೆ, ಜೀವ ಪರವಾದ ಸಾಂಸ್ಕೃತಿಕ, ಕಲೆ, ಸಂಸ್ಕೃತಿ, ಸಾಹಿತ್ಯ ನಗಣ್ಯವಾಗುತ್ತಿದೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಹದಿನಾಲ್ಕನೇ ಸಾಹಿತ್ಯ ಸಮ್ಮೇಳದನ ಅಧ್ಯಕ್ಷ ಎಂ.ವಿ.ನಾಗರಾಜರಾವ್, ಶ್ರೀರಾಮಕೃಷ್ಣ ಸೇವಾಶ್ರಾಮದ ಜಪಾನಂದಜಿ, ಶಾಸಕ ಜಿ.ಬಿ.ಜೋತಿಗಣೇಶ್ ಇತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!