ಶಿರಾ: ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ನೇತ್ರ ತಜ್ಞರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಅಜ್ಗರ್ ಬೇಗ್ ಅವರು ಆಸ್ಪತ್ರೆಯಲ್ಲಿ ಜನ ಸಾಮಾನ್ಯರಿಗೆ ಉತ್ತಮ ಚಿಕಿತ್ಸೆ ನೀಡುತ್ತ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು, ಆದರೆ ಅವರನ್ನು ಏಕಾಏಕಿ ತುಮಕೂರು ಜಿಲ್ಲಾಸ್ಪತ್ರೆಗೆ ವರ್ಗಾವಣೆ ಮಾಡಿದ್ದು, ಪುನಃ ಅವರನ್ನು ಶಿರಾ ಆಸ್ಪತ್ರೆಗೆ ವರ್ಗಾಯಿಸಬೇಕೆಂದು ಕುಂಚಶ್ರೀ ಪತ್ತಿನ ಸಹಕಾರ ಸಂಘದ ನಿರ್ದೇಶಕ ಕಾರೇಹಳ್ಳಿ ರಂಗನಾಥ್ ಒತ್ತಾಯಿಸಿದ್ದಾರೆ.
ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ಸುಮಾರು 8 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಅಜ್ಗರ್ ಬೇಗ್ ಅವರು ನೇತ್ರ ತಜ್ಞರಾಗಿ ಉತ್ತಮ ರೀತಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ತಜ್ಞರಾಗಿದ್ದರು, ಇವರು ಕರ್ನಾಟಕ ರಾಜ್ಯದಲ್ಲಿಯೇ ಅತಿ ಹೆಚ್ಚು ನೇತ್ರ ಶಸ್ತ್ರಚಿಕಿತ್ಸೆ ಮಾಡಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ, ಆಸ್ಪತ್ರೆಯಲ್ಲಿ ಯಾವುದೇ ತಾರತಮ್ಯ ಮಾಡದೆ ಸರಳ, ಸಜ್ಜನಿಕೆಯಿಂದ ಸಾರ್ವಜನಿಕರೊಂದಿಗೆ ವರ್ತಿಸುತ್ತಾ ತಮ್ಮ ಕುಟುಂಬ ಸದಸ್ಯರಿಗೆ ಚಿಕಿತ್ಸೆ ನೀಡುವ ರೀತಿಯಲ್ಲಿಯೇ ಸಾರ್ವಜನಿಕರಿಗೆ ಚಿಕಿತ್ಸೆ ನೀಡುತ್ತಿದ್ದರು, ಇಂತಹ ಉತ್ತಮ ವೈದ್ಯರು ಶಿರಾ ಸಾರ್ವಜನಿಕ ಆಸ್ಪತ್ರೆಗೆ ಅತ್ಯವಶ್ಯಕವಾಗಿ ಬೇಕಾಗಿದ್ದು, ಇವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ವರ್ಗಾವಣೆ ಮಾಡಿರುವುದನ್ನು ರದ್ದುಗೊಳಿಸಿ ಪುನಃ ಶಿರಾ ಸಾರ್ವಜನಿಕ ಆಸ್ಪತ್ರೆಗೆ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ನೇತ್ರ ತಜ್ಞರನ್ನು ಶಿರಾಕ್ಕೆ ವರ್ಗಾಯಿಸಲು ಒತ್ತಾಯ
Get real time updates directly on you device, subscribe now.
Comments are closed.