ಕುಣಿಗಲ್: ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಗ್ರೇಡ್-2 ತಹಶೀಲ್ದಾರ್ ಯೋಗೀಶ್ ಮೂಲಕ ರಾಜ್ಯ ಸರ್ಕಾರಕ್ಕೆ ಅರ್ಚಕರು, ಭಕ್ತರು ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಅರ್ಚಕ ಕಾರ್ತೀಕ್, ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ ಅಂಧಕಾಸುರನ ಸಂಹಾರ ಧಾರ್ಮಿಕ ಕಾರ್ಯಕ್ರಮ ನೆರೆವೇರಿಸುವ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ಉತ್ಸವ ಮೂರ್ತಿ ಮೇಲೆ ಎಂಜಲು ನೀರನ್ನು ಎರಚಿ ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು, ಮುಂದೆಂದೂ ಇಂತಹ ಘಟನೆ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.
ಈ ಉತ್ಸವ ಪ್ರತಿವರ್ಷ ಅನಾದಿ ಕಾಲದಿಂದ ನಡೆದುಕೊಂಡು ಬಂದಿದೆ, ಆದರೆ ಈ ವರ್ಷ ಕೆಲವು ದುಷ್ಕರ್ಮಿಗಳು ಪೂರ್ವ ನಿಯೋಜಿತ ಷ ಡ್ಯಂತ್ರ್ಯ ಮಾಡಿ ಸದರಿ ಉತ್ಸವದಲ್ಲಿ ದೊಂಬಿ, ಗಲಾಟೆ ಮಾಡಿ ಶ್ರೀನಂಜುಂಡೇಶ್ವರ ದೇವರಿಗೆ ಧಿಕ್ಕಾ ರ ಕೂಗಿ, ಉತ್ಸವ ಆಚರಣೆಗೆ ಭಂಗ ತರುವ ಮೂಲಕ ನಂಜುಂಡೇಶ್ವರನ ಅಸಂಖ್ಯಾತ ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ, ಉತ್ಸ ವ ಮೂರ್ತಿಯನ್ನು ಅಪವಿತ್ರ ಮಾಡಿದ್ದಾರೆ, ಸದರಿ ಘಟನೆ ಅತ್ಯಂತ ಗಂಭೀರವಾಗಿದ್ದು, ರಾಜ್ಯದ ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗೆ ಘಾಸಿಯುಂಟು ಮಾಡಿದೆ, ಪೊಲೀಸರು ಅಪರಾಧಿಗಳನ್ನು ಬಂಧನ ಮಾಡುವ ಬದಲು ಶಾಂತಿಯುತ ಪ್ರ ತಿಭಟನೆ ಮಾಡಿದ ಭಕ್ತರ ಮೇಲೆ ದೂರು ದಾಖಲು ಮಾಡಿರುವುದು ಖಂಡನೀಯ, ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಂಜುಂಡೇಶ್ವರ ಸ್ವಾಮಿಗೆ ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಹಾಕುತ್ತಿದ್ದು ಇದನ್ನು ನಿಯಂತ್ರಿಸುವಂತೆ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ರಾಜ್ಯಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಗ್ರಾಮ ದೇವತೆ ದೇವಸ್ಥಾನದ ಅರ್ಚಕರಾದ ಕುಮಾರ್, ಹಿಂದೂ ಜನಜಾಗೃತಿ ಸಮಿತಿಯ ಅರುಣ್ ಗೌಡ, ಮಂಜುನಾಥ ಇತರರು ಇದ್ದರು.
Comments are closed.