ನಾಮಫಲಕಗಳಲ್ಲಿ ಕನ್ನಡ ಬಳಸದಿದ್ದರೆ ಪರವಾನಗಿ ರದ್ದು

41

Get real time updates directly on you device, subscribe now.


ತುಮಕೂರು: ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು, ತಪ್ಪಿದಲ್ಲಿ ಉದ್ದಿಮೆಗಳ ಪರವಾನಗಿ ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತೆ ಅಶ್ವಿಜ.ಬಿ.ವಿ. ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ರಾಜ್ಯದಲ್ಲಿನ ನಾಮ ಫಲಕಗಳಲ್ಲಿ ಕನ್ನಡ ಬಳಸುವುದು ಕಡ್ಡಾಯವಾಗಿದೆ, ಕನ್ನಡ ಬಳಕೆಯ ಸಮಗ್ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಂಗಡಿ, ಮತ್ತಿತರ ಉದ್ದಿಮೆಗಳ ಪರವಾನಗಿ ನೀಡುವಾಗ ನಾಮ ಫಲಕಗಳಲ್ಲಿ ಅಗ್ರಸ್ಥಾನದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸದಿದ್ದರೆ ಉದ್ದಿಮೆ ಪರವಾನಗಿ ರದ್ದುಪಡಿಸಲಾಗುವುದು ಎಂದು ನಿರ್ಬಂಧ ವಿಧಿಸಲು ಸರ್ಕಾರ ಆದೇಶ ನೀಡಿದೆ.

ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಕನ್ನಡದಲ್ಲಿರತಕ್ಕದ್ದು, ನಾಮಫಲಕದಲ್ಲಿ ಅಗ್ರ ಪಂಕ್ತಿಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು, ಅಶ್ಲೀಲ ಭಾಷೆ ಹಾಗೂ ಚಿತ್ರಗಳನ್ನು ಪ್ರದರ್ಶಿಸುವಂತಿಲ್ಲ, ಅನ್ಯ ಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕ ದೊಡ್ಡದಾಗಿರುವಂತೆ ಅಳವಡಿಸಬೇಕು.

ಈ ಪ್ರಕಟಣೆ ಹೊರಡಿಸಿದ 15 ದಿನಗಳೊಳಗಾಗಿ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಉದ್ದಿಮೆಗಳ ನಾಮಫಲಕಗಳು ಪ್ರಧಾನವಾಗಿ ಕನ್ನಡದಲ್ಲಿರಬೇಕು, ತಪ್ಪಿದಲ್ಲಿ ಅಂತಹ ಉದ್ದಿಮೆಗಳ ಉದ್ದಿಮೆ ಪರವಾನಗಿ ರದ್ದುಪಡಿಸುವುದರ ಜೊತೆಗೆ ಉದ್ದಿಮೆ ಸ್ಥಗಿತಗೊಳಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!