ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ: ನ್ಯಾ.ನೂರುನ್ನೀಸ

73

Get real time updates directly on you device, subscribe now.


ತುಮಕೂರು: ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು, ತಿಂಗಳಿಗೆ ಎರಡು ಬಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಹಠಾತ್ ಭೇಟಿ ನೀಡಿ ಹಾಲು, ಮೊಟ್ಟೆ ಸೇರಿದಂತೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆಯೆ ಎಂಬುದನ್ನು ಪರಿಶೀಲಿಸಿ ಮೇಲಾಧಿಕಾರಿಗಳಿಗೆ ವರದಿ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಸದಸ್ಯ ಕಾರ್ಯದರ್ಶಿ ನೂರುನ್ನೀಸ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಿಗೆ ಆಟದ ಮೈದಾನ ಇರಬೇಕು, ಅಂಗನವಾಡಿ ಪಕ್ಕದಲ್ಲಿ ಖಾಸಗಿ ಶೌಚಾಲಯ ಕಟ್ಟಬಾರದು ಎಂದು ಸೂಚಿಸಿದರು.

ಪ್ಡೋಕರು ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸುವುದು ತಪ್ಪು, ಭಿಕ್ಷಾಟನೆ ತಡೆಯುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿ, ಸಿಬ್ಬಂದಿ ಪ್ರಮುಖ ವೃತ್ತಗಳು, ರೈಲ್ವೆ, ಬಸ್ ನಿಲ್ದಾಣಗಳು, ಮತ್ತಿತರ ಸ್ಥಳಗಳಲ್ಲಿ ಪರಿಶೀಲಿಸಬೇಕು, ಅಲ್ಲದೆ ಬಾಲ್ಯ ವಿವಾಹ ಮಾಡುವವರ ಮೇಲೆ ದೂರು ದಾಖಲಿಸಿ ಅಂತಹವರನ್ನು ಶಿಕ್ಷೆಗೆ ಗುರಿಪಡಿಸಬೇಕು, ಮೈತ್ರಿ ಯೋಜನೆ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಮಾತನಾಡಿ, ಬಾಣಂತಿಯರಿಗೆ ಎಲ್ಲಾ ಸೌಲಭ್ಯ ಸಿಗುತ್ತಿವೆಯೇ ಎಂದು ಅಧಿಕಾರಿಗಳು ಪ್ರತಿ ತಿಂಗಳು ಪರಿಶೀಲಿಸಿ ಅದರ ಮಾಹಿತಿ ನೀಡಬೇಕು, ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಬಾರದಂತೆ ನೋಡಿಕೊಳ್ಳಬೇಕು, ಮೈತ್ರಿ ಯೋಜನೆಯ ಬಗ್ಗೆ ಮಾಹಿತಿ ಇಲ್ಲದೆ ಯಾವುದೇ ಉಪಯೋಗವಾಗುತ್ತಿಲ್ಲ, ಆದ್ದರಿಂದ ಈ ಯೋಜನೆಯ ಮಾಹಿತಿ ನೀಡಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 1786 ಲಿಂಗತ್ವ ಸಂಖ್ಯಾತರಿದ್ದು, ಇದರಲ್ಲಿ 8 ಮಂದಿ ಮಾತ್ರ ಅರ್ಜಿ ಸಲ್ಲಿಸಿ, ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ ಪಡೆದಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಧರ್ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಅಪರಾಧ) ರಾಮಚಂದ್ರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!