ಮೆಗಾ ಗ್ಯಾಸ್ ಸೋರಿಕೆ- ಹೊತ್ತಿದ ಬೆಂಕಿ

63

Get real time updates directly on you device, subscribe now.


ತುಮಕೂರು: ನಗರದಲ್ಲಿ ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿರುವ ಮೆಗಾ ಗ್ಯಾಸ್ ಪೈಪ್ ಲೈನ್ ನಲ್ಲಿ ಪದೇ ಪದೇ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಳ್ಳುತ್ತಿರುವುದು ಜನರಲ್ಲಿ ತೀವ್ರ ಆತಂಕ ಮೂಡಿಸಿದೆ.
ಇಲ್ಲಿನ ಕುಣಿಗಲ್ ರಸ್ತೆಯ ಎಸ್ ಎಸ್ ಐ ಟಿ ಕಾಲೇಜು ಮುಂಭಾಗ ಮೆಗಾಗ್ಯಾಸ್ ಪೈಪ್ ಲೈನ್ ನಲ್ಲಿ ಹಾದು ಹೋಗಿದ್ದು, ಪೈಪ್ ಲೈನ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿದೆ, ಇದನ್ನು ಕಂಡು ಸಾರ್ವಜನಿಕರು ತಕ್ಷಣ ನೀರು ಹಾಕಿ ಬೆಂಕಿ ನಂದಿಸಿದ್ದಾರೆ.

ಮೆಗಾ ಗ್ಯಾಸ್ ಪೈಪ್ ಲೈನ್ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ಈ ಭಾಗದ ಪಾಲಿಕೆ ಸದಸ್ಯ ಧರಣೇಂದ್ರ ಕುಮಾರ್ ಸ್ಥಳಕ್ಕೆ ಧಾವಿಸಿ ಸಂಬಂಧಪಟ್ಟವರಿಗೆ ವಿಷಯ ತಿಳಿಸಿ ಗ್ಯಾಸ್ ಪೈಪ್ ಲೈನ್ ದುರಸ್ಥಿಪಡಿಸುವ ಕಾರ್ಯ ಮಾಡಿದರು.
ನಗರದ ವಿವಿಧೆಡೆ ಮೆಗಾಗ್ಯಾಸ್ ಪೈಪ್ ಲೈನ್ ನಲ್ಲಿ ಇದೇ ರೀತಿ ಗ್ಯಾಸ್ ಸೋರಿಕೆಯಾಗುತ್ತಾ ಬೆಂಕಿ ಹೊತ್ತಿಕೊಳ್ಳುತ್ತಿದೆ, ಆದರೂ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ನಾಗರಿಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

Get real time updates directly on you device, subscribe now.

Comments are closed.

error: Content is protected !!