ಬಾಲಗಂಗಾಧರನಾಥಶ್ರೀ ಸಂಸ್ಮರಣೆ ಆಚರಣೆ

ಮಹನೀಯರ ಆದರ್ಶ ಎಲ್ಲರೂ ಪಾಲಿಸಲಿ: ಹಿರೇಮಠಶ್ರೀ

68

Get real time updates directly on you device, subscribe now.


ತುಮಕೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳ 11ನೇ ಸಂಸ್ಮರಣಾ ಕಾರ್ಯಕ್ರಮವನ್ನು ನಗರದಲ್ಲಿ ಭಕ್ತರು ಆಚರಿಸಿ, ಪೂಜ್ಯರಿಗೆ ಭಕ್ತಿ ಸಮರ್ಪಣೆ ಮಾಡಿದರು.
ಶನಿವಾರ ನಗರದ ಡಾ.ಶಿವಕುಮಾರಸ್ವಾಮೀಜಿಗಳ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅವರು ಡಾ.ಬಾಲಗಂಗಾಧರ ಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ನಂತರ ಮಾತನಾಡಿ ಸ್ವಾಮೀಜಿ, ಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳು ಈ ನಾಡಿನ ಎರಡು ಕಣ್ಣುಗಳಿದ್ದಂತೆ ತಮ್ಮ ಸೇವೆ, ಮಾರ್ಗದರ್ಶನದ ಮೂಲಕ ನಾಡಿಗೆ ಬೆಳಕಾಗಿದ್ದಾರೆ. ಅವರ ಆದರ್ಶಗಳು ಸದಾ ಸ್ಮರಣೀಯ ಎಂದರು.

ಅಂತಹ ಅಪರೂಪದ ಈ ಮಹಾನುಭಾವರು ಈ ನಾಡಿನಲ್ಲಿ ಜನಿಸಿದ್ದು ನಮ್ಮ ಪುಣ್ಯ. ಅವರ ಆಶಯಗಳನ್ನು ಸಾಕಾರಗೊಳಿಸುವತ್ತ ನಾವೆಲ್ಲಾ ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು.
ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಮಾತನಾಡಿ, ಡಾ.ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳು ನಾವು ಕಂಡ ದೇವರು. ಅವರ ಸೇವೆ, ಕಟ್ಟಿದ ಶಿಕ್ಷಣ ಸಂಸ್ಥೆಗಳು, ಸಸ್ಯ ಸಂರಕ್ಷಣೆ, ನೀಡಿದ ಅನ್ನ, ಆಶ್ರಯ ಶ್ಲಾಘನೀಯ ಎಂದರು.

ತುಮಕೂರು ವಿಶ್ವವಿದ್ಯಾಲಯದಲ್ಲಿ ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳ ಅಧ್ಯಯನ ಪೀಠ ಆರಂಭಿಸಿ ವಿದ್ಯಾರ್ಥಿಗಳು, ಯುವ ಜನರಿಗೆ ಶ್ರೀಗಳ ತತ್ವಾದರ್ಶ ತಿಳಿಸುವ ಕೆಲಸ ಆಗಬೇಕು ಎಂದರು.
ಆಯೋಜಕ ರಾಮಮೂರ್ತಿಗೌಡ, ಮುಖಂಡರಾದ ದೊಡ್ಡಲಿಂಗಪ್ಪ, ಶ್ರೀನಾಥ್, ಸಿದ್ಧಲಿಂಗೇಗೌಡ, ಸಿಮೆಂಟ್ ಮಂಜುನಾಥ್ ಇತರರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

Get real time updates directly on you device, subscribe now.

Comments are closed.

error: Content is protected !!