ಫೆ.7ಕ್ಕೆ ಅರ್ಚಕರ ರಾಜ್ಯಮಟ್ಟದ ಸಮಾವೇಶ

????????????????????????????????????
49

Get real time updates directly on you device, subscribe now.

????????????????????????????????????

ತುಮಕೂರು: ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಆರ್ಚಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ನೀಡುತ್ತಿರುವ ತಸ್ತೀಕ್ ಹೆಚ್ಚಳ, ಮಾಸಿಕ ಗೌರವ ಧನ ಹಾಗೂ ಖಜಾನೆ ಮೂಲಕ ಗೌರವ ಧನ ಪಾವತಿ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಫೆಬ್ರವರಿ 7 ರಂದು ಬೆಂಗಳೂರಿನ ಪುರಭವನದಲ್ಲಿ ಅರ್ಚಕರು, ಆಗಮಿಕರು ಮತ್ತು ಉಪಾಧಿವಂತರ ರಾಜ್ಯಮಟ್ಟದ ಸಮಾವೇಶ ಘಂಟನಾದ-2 ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ,ಆಗಮಿಕರ ಸಂಘದ ರಾಜ್ಯಾಧ್ಯಕ್ಷ ಎಂ.ಎಸ್.ವೆಂಕಟಾಚಲಯ್ಯ ತಿಳಿಸಿದ್ದಾರೆ.
ತುಮಕೂರಿನ ಮಾರುತಿನಗರದ ಶ್ರೀವೈಷ್ಣವ ಸಭಾದಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸರಕಾರ ಈಗಾಗಲೇ ನಮ್ಮ ಹಲವು ಬೇಡಿಕೆ ಈಡೇರಿಸಿದೆ, ಇದರ ಭಾಗವಾಗಿ ಸರಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಧಾರ್ಮಿಕ ದತ್ತಿ ಇಲಾಖೆ ಮಂತ್ರಿಗಳ ಹಾಗೂ ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ಹೊಸ ಬೇಡಿಕೆಗಳನ್ನು ಸರಕಾರದ ಮುಂದಿಡುವ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಸುಮಾರು 36 ಸಾವಿರ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಅರ್ಚಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ, ಆಗಮಿಕರ ಸಂಘ ಹಾಗೂ ಅಖಿಲ ಕರ್ನಾಟಕ ಹಿಂದು ದೇವಾಲಯಗಳ ಆಗಮಿಕರ, ಉಪಾಧಿವಂತರ ಒಕ್ಕೂಟದ ಸಹಯೋಗದಲ್ಲಿ ನಡೆಯುತ್ತಿರುವ ಅರ್ಚಕರು, ಆಗಮಿಕರ ಸಮಾವೇಶ ಘಂಟನಾದ -2ರ ಬಗ್ಗೆ ರಾಜ್ಯದಲ್ಲಿರುವ ಅರ್ಚಕರು, ಆಗಮಿಕರಿಗೆ ತಿಳಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಪೂರ್ವಭಾವಿ ಸಭೆ ನಡೆಸಿ ಮಾಧ್ಯಮಗಳ ಮೂಲಕ ಪ್ರಚಾರ ನಡೆಸುತ್ತಿದ್ದು, ತುಮಕೂರಿನಲ್ಲಿ ಸಹ ಪ್ರಚಾರ ಕೈಗೊಳ್ಳಲಾಗಿದೆ, ಫೆಬ್ರವರಿ 07 ರಂದು ನಡೆಯುವ ರಾಜ್ಯ ಸಮಾವೇಶದಲ್ಲಿ ಹೆಚ್ಚಿನ ಜನರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಎಂ.ಎಸ್.ವೆಂಕಟಾಚಲಯ್ಯ ಮನವಿ ಮಾಡಿದರು.
ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ, ಆಗಮಿಕರ ಸಂಘದ ಉಪಾಧ್ಯಕ್ಷ ವಿ.ಕೃಷ್ಣಯ್ಯ ಮಾತನಾಡಿ, ನಮ್ಮ ಸಂಘ ಸ್ಥಾಪನೆಯಾದ ನಂತರ ಸರಕಾರದ ಮುಂದಿಟ್ಟ ಹಲವು ಬೇಡಿಕೆ ಈಡೇರಿಸಿವೆ, ಆರಂಭದಲ್ಲಿ ತಿಂಗಳಿಗೆ 500 ರೂ. ಇದ್ದ ತಸ್ತೀಕ್ ಇಂದು 5000 ರೂ. ಗೆ ತಲುಪಿದೆ, ಆದರೆ ಇಂದಿನ ಬೆಲೆ ಹೆಚ್ಚಳದ ಭರದಲ್ಲಿ ಐದು ಸಾವಿರ ರೂ. ಗಳಿಂದ ಯಾವುದೇ ಪೂಜೆ, ಪುನಸ್ಕಾರ ಮಾಡಲು ಸಾಧ್ಯವಿಲ್ಲ, ಹಾಗಾಗಿ ಕನಿಷ್ಠ ಮಾಸಿಕ 8000 ರೂ. ಗಳಿಗೆ ತಸ್ತೀಕ್ ಹೆಚ್ಚಳ ಮಾಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ, ಇದರ ಜೊತೆಗೆ ಇಡೀ ದಿನ ದೇವಾಲಯದಲ್ಲಿಯೇ ಕಳೆಯುವ ನಮಗೆ ಬೇರೆ ಆದಾಯದ ಮೂಲಗಳಿಲ್ಲ, ಹಾಗಾಗಿ ಮಾಸಿಕ 10 ಸಾವಿರ ರೂ. ಗೌರವಧನ ನೀಡಬೇಕು, ಹಾಗೆಯೇ ಕೆಲ ದೇವಾಲಯಗಳು ಶಿಥಿಲಗೊಂಡಿದ್ದು, ಅವುಗಳ ಜೀರ್ಣೋದ್ಧಾರ ಮಾಡಬೇಕು, ಸ್ವಯಂ ನಿವೃತ್ತಿ ಪಡೆದರೆ ಐದು ಲಕ್ಷ ರೂ. ಹಿಡಿಗಂಟು ನೀಡಬೇಕು ಎಂಬುದು ನಮ್ಮಗಳ ಬೇಡಿಕೆಯಾಗಿದೆ ಎಂದರು.

ಘಂಟನಾದ-02 ರಾಜ್ಯ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಧಾರ್ಮಿಕ ದತ್ತಿ ಇಲಾಖೆಯ ಮಂತ್ರಿ ರಾಮಲಿಂಗಾರೆಡ್ಡಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಸರಕಾರದ ಹಲವು ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ, ತುಮಕೂರು ಜಿಲ್ಲೆಯಲ್ಲಿರುವ 2883 ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಅರ್ಚಕರು, ಆಗಮಿಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದರು.
ಈ ವೇಳೆ ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ, ಆಗಮಿಕರ ಸಂಘ ಖಜಾಂಚಿ ಆರ್.ರಘು, ಸಹ ಕಾರ್ಯದರ್ಶಿ ಗೋಪಿನಾಥ್, ತುಮಕೂರು ಜಿಲ್ಲಾಧ್ಯಕ್ಷ ನಂದೀಶ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!