ತುಮಕೂರು: ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜನವರಿ 29 ರಂದು ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಅಧಿಕಾರಿಗಳೊಂದಿಗೆ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜೂನಿಯರ್ ಕಾಲೇಜು ಮೈದಾನದಲ್ಲಿ 100*66 ಅಡಿ ಅಳತೆಯಲ್ಲಿ ನಿರ್ಮಿಸಿರುವ ವೇದಿಕೆಯನ್ನು ಸಚಿವರು ಖುದ್ದಾಗಿ ಪರಿಶೀಲಿಸಿ ಕಾರ್ಯಕ್ರಮ ವೀಕ್ಷಿಸಲು ಗಣ್ಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಗಣ್ಯರಿಗಾಗಿ 500 ಆಸನ, ಫಲಾನುಭವಿಗಳು ಸೇರಿದಂತೆ ಸಾರ್ವಜನಿಕರಿಗಾಗಿ 75,000 ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗೆ ಅಗತ್ಯ ಸಿಬ್ಬಂದಿ ನಿಯೋಜಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಪಾಲಿಕೆ ಆಯುಕ್ತೆ ಅಶ್ವಿಜ, ಉಪ ವಿಭಾಗಾಧಿಕಾರಿ ಗೌರವ ಕುಮಾರ್ ಶೆಟ್ಟಿ, ವಿವಿಧ ತಾಲ್ಲೂಕಿನ ತಹಶೀಲ್ದಾರರು ಹಾಜರಿದ್ದರು.
Comments are closed.