ಸಿಎಂರಿಂದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

49

Get real time updates directly on you device, subscribe now.


ತುಮಕೂರು: ಜನವರಿ 29ಕ್ಕೆ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುತ್ತಿದ್ದಾರೆ, ಅಂದು ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನಡೆಯಲಿದೆ, 697 ಕೋಟಿ ರೂ. ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಮತ್ತು ಉದ್ಘಾಟನೆ ನಡೆಯಲಿದೆ, ವಿಶ್ವ ವಿದ್ಯಾಲಯದ ಮೊದಲ ಹಂತದ ಕಟ್ಟಡ ಉದ್ಘಾಟಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ 55 ಲಕ್ಷ ಮಾನವ ದಿನಗಳನ್ನು ಖರ್ಚು ಮಾಡಲಾಗಿದೆ, ಸುಮಾರು 450 ಕೋಟಿ ರೂ. ಯಷ್ಟು ಕೆಲಸ ಮಾಡಲಾಗಿದೆ, ಇದು ಇಡೀ ರಾಜ್ಯದಲ್ಲಿ ನರೇಗಾ ಅನುಷ್ಠಾನದಲ್ಲಿ ತುಮಕೂರು ಮೊದಲ ಸ್ಥಾನದಲ್ಲಿದೆ, ಜಿಲ್ಲೆಯ ಒಂದು ಸಾವಿರ ಶಾಲೆಗಳಿಗೆ ಕಾಂಪೌಂಡ್, ಶೌಚಾಲಯ, ಆಟದ ಮೈದಾನ ಸೇರಿದಂತೆ ಇನ್ನಿತರ ಮೂಲಭೂತ ಸೌಲಭ್ಯ ನೀಡಲು 85 ಕೋಟಿ ರೂ. ಅನುದಾನ ಖರ್ಚು ಮಾಡಲಾಗುತ್ತಿದೆ, ಕೆಲ ಶಾಲೆಗಳ ಅಭಿವೃದ್ಧಿ ಕಾರ್ಯ ಮುಗಿಯುತ್ತ ಬಂದಿದೆ, ಸುಸಜ್ಜಿತ ಸೌಲಭ್ಯ ಕಲ್ಪಿಸಲಾಗಿದೆ, ವಿಜ್ಞಾನ, ತಾಂತ್ರಿಕ ಪದವಧರ ಕೋರ್ಸ್ಗಳಾದ ಸೈಬರ್ ಕ್ರೈಂ, ಆರ್ಥಿಕ ಪದವಿ ಪ್ರಾರಂಭಿಸಲು ಹೆಚ್ಚು ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದರು.

Get real time updates directly on you device, subscribe now.

Comments are closed.

error: Content is protected !!