ನಾಳೆ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ

33

Get real time updates directly on you device, subscribe now.


ತುಮಕೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಜನವರಿ 29 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳ ಸವಲತ್ತು ವಿತರಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮಾರಂಭ ಉದ್ಘಾಟಿಸುವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣ ಸ್ವಾಮಿ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ಸಚಿವರಾದ ಹೆಚ್.ಕೆ.ಪಾಟೀಲ್, ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಡಾ.ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಎನ್.ಚೆಲುವರಾಯ ಸ್ವಾಮಿ, ಎಸ್.ಎಸ್.ಮಲ್ಲಿಕಾರ್ಜುನ್, ಸಂತೋಷ್ ಎಸ್. ಲಾಡ್, ಕೆ.ವೆಂಕಟೇಶ್, ಶಿವರಾಜ್ ಸಂಗಪ್ಪ ತಂಗಡಗಿ, ಬಿ.ನಾಗೇಂದ್ರ, ಕೆ.ಎನ್.ರಾಜಣ್ಣ, ಸುರೇಶ್.ಬಿ.ಎಸ್, ಲಕ್ಷ್ಮಿ ಆರ್. ಹೆಬ್ಬಾಳ್ಕರ್, ಮಂಕಾಳ ವೈದ್ಯ, ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್, ನವದೆಹಲಿಯ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ.ಜಯಚಂದ್ರ ಉಪಸ್ಥಿತಿಯಲ್ಲಿ ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಅಧ್ಯಕ್ಷತೆ ವಹಿಸುವರು.
ಕಾಯಕ್ರಮದಲ್ಲಿ ಜಿಲ್ಲೆಯ ಸಂಸದರು, ಜಿಲ್ಲೆಯ ಶಾಸಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು, ತುಮಕೂರು ಮಹಾಪೌರರಾದ ಪ್ರಭಾವತಿ ಸುಧೀಶ್ವರ್, ಅಧಿಕಾರಿಗಳು ಭಾಗವಹಿಸುವರು.

Get real time updates directly on you device, subscribe now.

Comments are closed.

error: Content is protected !!