ತುಮಕೂರು: ರೈತ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ತೆಂಗು ಬೆಳೆಗಾರರನ್ನು ಸೋಮವಾರ ಭೇಟಿ ಮಾಡಿದ ಸಂಸದ ಜಿ.ಎಸ್.ಬಸವರಾಜು, ಬೆಳೆಗಾರರ ಬೇಡಿಕೆಗಳ ಬಗ್ಗೆ ಲೋಕಸಭೆ ಅಧಿವೇಶನದಲ್ಲಿ ಚರ್ಚಿಸುವುದಾಗಿ ಹೇಳಿದರು.
ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಟ 15 ಸಾವಿರ ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಅವರಿಗೆ ತಾವು ಪತ್ರ ಬರೆದು ಮನವಿ ಮಾಡಿದ್ದೇನೆ, ಈ ಸಂಬಂಧ ಅಧಿವೇಶನದಲ್ಲಿ ಚರ್ಚೆ ಮಾಡಿ ಸಚಿವರಿಂದ ಉತ್ತರ ಪಡೆಯುವುದಾಗಿ ಸಂಸದರು ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ರೈತ ಸಂಘದ ಮುಖಂಡ ಧನಂಜಯಾರಾಧ್ಯ ಇತರರು ಈ ವೇಳೆ ಹಾಜರಿದ್ದರು.
ತೆಂಗು ಬೆಳೆಗಾರರನ್ನು ಭೇಟಿ ಮಾಡಿದ ಜಿ ಎಸ್ ಬಿ
Get real time updates directly on you device, subscribe now.
Prev Post
Next Post
Comments are closed.