ಗಿನ್ನಿಸ್ ದಾಖಲೆ ನಿರ್ಮಿಸಿದ ತುಮಕೂರು

ಪ್ಲಾಸ್ಟಿಕ್ ಬಾಟಲ್ ಬಳಸಿ ದಾಖಲೆ ನಿರ್ಮಾಣ- ಪಾಲಿಕೆ ಆಯುಕ್ತರ ಕಾರ್ಯಕ್ಕೆ ಶ್ಲಾಘನೆ

37

Get real time updates directly on you device, subscribe now.


ತುಮಕೂರು: ಏಕಬಳಕೆ ಪ್ಲಾಸ್ಟಿಕ್ ಬಾಟಲ್ ಗಳನ್ನು ಉಪಯೋಗಿಸಿ ಗಿನ್ನಿಸ್ ದಾಖಲೆ ನಿರ್ಮಿಸುವಲ್ಲಿ ಸ್ಮಾರ್ಟ್ ಸಿಟಿ ಹಾಗೂ ಮಹಾನಗರ ಪಾಲಿಕೆ ಯಶಸ್ವಿಯಾಗಿದೆ, ಆ ಮೂಲಕ ಕತಾರ್ ದೇಶದಲ್ಲಿ ನಿರ್ಮಾಣವಾಗಿದ್ದ ದಾಖಲೆಯನ್ನು ಉಡೀಸ್ ಮಾಡಲಾಗಿದೆ.
ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿ ತುಮಕೂರು ಎಂಬ ಕನ್ನಡ ಪದದ ಕಲಾಕೃತಿ ನಿರ್ಮಿಸುವ ಮೂಲಕ ತುಮಕೂರು ನಗರವನ್ನು ವಿಶ್ವ ಗಿನ್ನಿಸ್ ದಾಖಲೆಗೆ ಸೇರಿಸುವ ಪ್ರಯತ್ನ ಯಶಸ್ವಿಯಾಗಿದೆ.

ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ಬಳಕೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪಾಲಿಕೆ ಆಯುಕ್ತರಾದ ಅಶ್ವಿಜಾ.ಬಿ.ವಿ. ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ ಅಬೂತಪೂರ್ವ ಯಶಸ್ಸು ಖಂಡಿದೆ.
ಕಳೆದ 20 ದಿನಗಳಿಂದ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳ ಮನೆ, ಹೋಟೆಲ್, ರೆಸ್ಟೋರೆಂಟ್, ಫುಡ್ ಸ್ಟ್ರೀಟ್, ಕನ್ವೆನ್ಷನ್ ಹಾಲ್, ಚೌಟರಿಗಳಿಂದ ಸಂಗ್ರಹಿಸಲಾದ ಏಕಬಳಕೆ ಬಾಟಲಿಗಳನ್ನು ಕಲಾಕೃತಿಗೆ ಬಳಸಲಾಗಿದೆ.
ಈ ಹಿಂದೆ 14500 ಪ್ಲಾಸ್ಟಿಕ್ ಬಾಟಲಿ ಬಳಸಿ ಕತಾರ್ ದೇಶದಲ್ಲಿ ಕತಾರ್ ಎಂಬ ಆಂಗ್ಲ ಪದದ ಕಲಾಕೃತಿ ನಿರ್ಮಿಸಿ ಗಿನ್ನಿಸ್ ದಾಖಲೆಯಾಗಿತ್ತು, ಈ ದಾಖಲೆ ಮುರಿದು ಹೊಸ ದಾಖಲೆ ನಿರ್ಮಿಸಲು 1.5 ಲಕ್ಷ
ಅರ್ಧ ಲೀಟರ್ ಹಾಗೂ 1 ಲೀಟರ್ ಬಾಟಲಿಗಳನ್ನು ಬಳಸಿ ಪೌರ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ನಾಗರಿಕರು, ಎನ್ ಸಿಸಿ, ಎನ್ ಎಸ್ ಎಸ್ ವಿದ್ಯಾರ್ಥಿಗಳು ಮತ್ತು ಸ್ವತಃ ಪಾಲಿಕೆ ಸದಸ್ಯರು ಪಾಲ್ಗೊಂಡು ಕಲಾಕೃತಿ ರಚಿಸಿ ಗಿನ್ನೀಸ್ ದಾಖಲೆ ಬರೆದಿದ್ದಾರೆ.

ಈ ಕಲಾಕೃತಿ ನಿರ್ಮಾಣಕ್ಕೆ ಸಮಯದ ಮಿತಿ ನಿಗದಿಗೊಳಿಸಿರಲಿಲ್ಲ, 5 ರಿಂದ 8 ಗಂಟೆ ಸಮಯದಲ್ಲಿ ಕಲಾಕೃತಿ ನಿರ್ಮಿಸಲಾಯಿತು, ಲಂಡನ್ ನಿಂದ ಆಗಮಿಸಿದ್ದ ತೀರ್ಪುಗಾರರ ಸಮಕ್ಷಮದಲ್ಲಿ ತುಮಕೂರು ಕಲಾಕೃತಿ ನಿರ್ಮಾಣವಾಯಿತು, ಅಂತಿಮವಾಗಿ ತೀರ್ಪುಗಾರರು ಗಿನ್ನಿಸ್ ದಾಖಲೆಯ ಪ್ರಕ್ರಿಯೆ ನಡೆಸಿ ಅಂತಿಮವಾಗಿ ತುಮಕೂರು ಕಲಾಕೃತಿ ಗಿನ್ನಿಸ್ ದಾಖಲೆಗೆ ಅರ್ಹ ಎಂಬುದನ್ನು ಘೋಷಿಸಿದರು.
ತುಮಕೂರು ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಲಂಡನ್ನಿಂದ ಆಗಮಿಸಿದ್ದ ತೀರ್ಪುಗಾರರು ಗಿನ್ನಿಸ್ ದಾಖಲೆಯ ಪ್ರಮಾಣ ಪತ್ರವನ್ನು ಪಾಲಿಕೆ ಆಯುಕ್ತೆ ಅಶ್ವಿಜಾ ಅವರಿಗೆ ಸಲ್ಲಿಸಿದರು. ಪಾಲಿಕೆ ಆಯುಕ್ತರ ಪರಿಸರ ಕಾಳಜಿ ಮತ್ತು ಗಿನ್ನಿಸ್ ದಾಖಲೆ ಬರೆಯುಲು ತೆಗೆದುಕೊಂಡ ಮುತುವರ್ಜಿಗೆ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಯಿತು.

Get real time updates directly on you device, subscribe now.

Comments are closed.

error: Content is protected !!