ತುಮಕೂರು: ರಾಜ್ಯಾದ್ಯಂತ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿ ಹಾಗೂ ಗ್ರಾಮ ಚಲೋ ಅಭಿಯಾನದ ರಾಜ್ಯ ಸಂಚಾಲಕ ವಿನಯ್ ಬಿದರೆ ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿ ಕಮಲ ಕೃಪದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ರಾಜ್ಯಾದ್ಯಂತ ಫೆಬ್ರವರಿ 9 ರಿಂದ 11 ರ ವರೆಗೆ ಮೂರು ದಿನ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ ಎಂದರು.
ರಾಜ್ಯದ 28,000 ಹಳ್ಳಿ, 19000 ನಗರ ಬೂತ್ ಗಳಲ್ಲಿ 42000 ಕಾರ್ಯ ಕರ್ತರು ಮೂರು ದಿನ ನಿರಂತರವಾಗಿ ಅಭಿಯಾನದಲ್ಲಿ ಭಾಗವಹಿಸುವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾ ಗಿದೆ, ಅಭಿಯಾನದ ಮೂಲಕ ಪ್ರತಿ ಗ್ರಾಮ ಮನೆಗೆ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ ನೀಡಲಿದ್ದಾರೆ ಎಂದರು.
ಈ ಅಭಿಯಾನ ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ, ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಬೇಕೆಂಬ ಆಶಯದೊಂದಿಗೆ ಗೋಡೆ ಬರಹ ಬರೆಯಲಾಗುವುದು, ದೇಶದ ಕಟ್ಟ ಕಡೆಯ ವ್ಯಕ್ತಿಗೂ ಅಭಿವೃದ್ಧಿ ಕಾರ್ಯಕ್ರಮಗಳ ತಲುಪಿಸುವ ನಿಟ್ಟಿನಲ್ಲಿ ಅಭಿಯಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಹಿಂದು ಳಿದ ವರ್ಗಗಳ ಸಂಚಾಲಕ ಸಂದೀಪ್ಗೌಡ, ರೈತ ಮೋರ್ಚಾದ ಬ್ಯಾಟರಂಗೇಗೌಡ, ವೈ.ಎಚ್.ಹುಚ್ಚಯ್ಯ, ರುದ್ರೇಶ್, ಮಾಧ್ಯಮ ಸಲಹೆಗಾರ ಜಗದೀಶ್ ಇತರರು ಇದ್ದರು.
Comments are closed.