ವಾಹನ ಡಿಕ್ಕಿ- ಚಿರತೆ ಸಾವು

48

Get real time updates directly on you device, subscribe now.


ಗುಬ್ಬಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಸುಮಾರು 3 ವರ್ಷದ ಹೆಣ್ಣುಚಿರತೆ ಸ್ಥಳದಲ್ಲಿಯೇ ಮೃತ ಪಟ್ಟಿರುವ ಘಟನೆ ತಾಲ್ಲೂಕಿನ ನಿಂಗಮ್ಮನ ಹಳ್ಳಿ ಬಳಿ ಗುಬ್ಬಿ- ಸಿ.ಎಸ್.ಪುರ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಾರಿಯಾಗಿರುವ ವಾಹನದ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ, ಅರಣ್ಯಇಲಾಖೆ ಅಧಿಕಾರಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ, ಮರಣೋತ್ತರ ಪರೀಕ್ಷೆ ನಡೆಸಿ ನಿಯಮಾನುಸಾರ ಅಂತಿಮ ಸಂಸ್ಕಾರ ನೆಡಸಲು ಕ್ರಮ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಈ ಭಾಗದಲ್ಲಿ ಚಿರತೆಗಳು ಹೆಚ್ಚಾಗಿದ್ದು ಹಗಲಿನಲ್ಲಿಯೂ ಯಾವುದೇ ಆತಂಕವಿಲ್ಲದೆ ತಿರುಗಾಡುತ್ತಿರುವುದು ಕಂಡು ಬರುತ್ತಿದೆ ಎಂದು ರೈತರು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!