ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲ್ಲೂಕುವಾರು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರೊಂದಿಗೆ ವೀಡಿಯೋ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಸ್ವಚ್ಛ ಭಾರತ್ ಮಿಷನ್, ಜಲಜೀವನ್ ಮಿಷನ್, ವಸತಿ ಯೋಜನೆ ಸೇರಿದಂತೆ ಹಲವಾರು ಪ್ರಮುಖ ವಿಚಾರಗಳ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಿಇಒ ಸಂವಾದ ಹಮ್ಮಿಕೊಂಡಿದ್ದರು.
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಭು ಜಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯಯ, ಪ್ರಮುಖವಾಗಿ ಶಿಕ್ಷಣಕ್ಕೆ ಒತ್ತು ಕೊಟ್ಟಾಗ ಮಾತ್ರ ಸಮಾಜವು ಸನ್ಮಾರ್ಗದಲ್ಲಿ ನಡೆಯುತ್ತದೆ, ಇದೇ ಉದ್ದೇಶ ಇಟ್ಟುಕೊಂಡು ಈಗಾಗಲೇ ನರೇಗಾ ಯೋಜನೆಯಡಿ ಶಾಲಾ ಅಭಿವೃದ್ಧಿ ಕಾಮಗಾರಿ ಅನುಷ್ಠಾನ ಮಾಡಲಾಗುತ್ತಿದೆ ಎಂದರು.
ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಗ್ರಾಮಗಳ ಸಂಪೂರ್ಣ ಸ್ವಚ್ಛತೆ ಕಾಪಾಡುವುದು ಸ್ಥಳೀಯ ಸಂಸ್ಥೆಗಳ ಮುಖ್ಯ ಕಾರ್ಯವಾಗಿದೆ ಎಂದ ಅವರು ಅವಶ್ಯಕತೆ ಇರುವ ಬಡ ಕುಟುಂಬಗಳಿಗೆ ವಸತಿ ಸೌಲಭ್ಯ ಒದಗಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಶಾಲಾ ಶಿಕ್ಷಕರೊಂದಿಗೆ ಮಾತನಾಡಿದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಶಾಲಾ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಿಕ್ಷಕರಿಂದ ಮಾಹಿತಿ ಸಂಗ್ರಹಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಹಾಗೂ ಶಾಲಾ ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
Comments are closed.