ತುಮಕೂರು: ಶ್ರೀಜಗಜ್ಯೋತಿ ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರವು ಘೋಷಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಸೂಚನೆಯಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಫೆಬ್ರವರಿ 17 ರಂದು ಬೆಳಗ್ಗೆ 11ಗಂಟೆಗೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾಮಾಜಿಕ ಮತ್ತು ಸಬಲೀಕರಣ ಇಲಾಖೆಯ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ನವ ದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮತ್ತು ಜಿಲ್ಲೆಯ ಎಲ್ಲಾ ಸಂಸದರು, ಶಾಸಕರು ಭಾಗವಹಿಸಲಿದ್ದು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್ ತಿಳಿಸಿದ್ದಾರೆ.
Comments are closed.