ಸಾಂಸ್ಕೃತಿಕ ನಾಯಕ ಬಸವಣ್ಣರ ಭಾವಚಿತ್ರ ಅನಾವರಣ

30

Get real time updates directly on you device, subscribe now.


ತುಮಕೂರು: ಲಿಂಗ, ಜಾತಿ, ವರ್ಗ ಭೇದವಿಲ್ಲದೆ ಸಮ ಸಮಾಜ ಕಟ್ಟಬೇಕೆಂದು ಪ್ರಾಮಾಣಿಕವಾಗಿ ಪ್ರಯತ್ನಪಟ್ಟವರು ಜಗದ್ಗುರು ಬಸವಣ್ಣನವರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಜಗದ್ಗುರು ಬಸವಣ್ಣ ಅವರ ತತ್ವಗಳು ಇಂದಿಗೂ ಜೀವಂತವಾಗಿವೆ, 12ನೇ ಶತಮಾನದಲ್ಲಿಯೇ ರೂಪಿಸಿದ ಸಾಮಾಜಿಕ ನ್ಯಾಯ, ಸಮಾನತೆ, ತತ್ವಗಳನ್ನು ಭಾರತ ಸಂವಿಧಾನದಲ್ಲಿ ಕಾಣಬಹುದಾಗಿದೆ ಎಂದು ತಿಳಿಸಿದರು.

ಮಾನವ ತನ್ನ ಕೈಲಾದಷ್ಟು ಒಬ್ಬರಿಗೆ ಸಹಾಯ ಮಾಡಿದರೆ ಅದೇ ಸ್ವರ್ಗ, ಬೇರೆಯವರನ್ನು ನೋಯಿಸಿದರೆ ಅದೇ ನರಕವೆಂದು ಬಸವಣ್ಣನವರು ತಿಳಿಸಿದ್ದು, ಇದನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಮ್ಮ ಮಾತಿನಿಂದ ಯಾರಿಗೂ ನೋವಾಗದಂತೆ ನಡೆದುಕೊಳ್ಳಬೇಕು ಎಂದು ಹೇಳಿದರು.

ಸರ್ಕಾರದ ವತಿಯಿಂದ ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಣೆ ಮಾಡಲಾಗಿದೆ, ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ, ಸರ್ಕಾರಿ ಸೇವೆಯಲ್ಲಿರುವ ನಾವೆಲ್ಲರೂ ಸೇರಿ ಒಂದು ಒಳ್ಳೆಯ ಸ್ವರ್ಗದಂತಹ ನಾಡನ್ನು ಕಟ್ಟಬೇಕು ಎಂದರು.
ಈ ಸಂದರ್ಭದಲ್ಲಿ ರಂಗ ಕಲಾವಿದ ಲಕ್ಷ್ಮಣ್ ದಾಸ್ ಅವರು ಬಸವಣ್ಣನವರ ವಚನ ಹಾಡಿದರು, ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!