ಒತ್ತಡ ನಿವಾರಣೆಗೆ ಕ್ರೀಡೆಗಳು ಸಹಕಾರಿ: ಕರಾಳೆ

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ

45

Get real time updates directly on you device, subscribe now.


ತುಮಕೂರು: ಸರ್ಕಾರಿ ನೌಕರರು ಒತ್ತಡಗಳ ನಡುವೆ ಕೆಲಸ ಮಾಡುವುದರಿಂದ ತಮ್ಮ ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು, ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಗತ್ಯ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ಅಭಿಪ್ರಾಯಪಟ್ಟರು.

ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ 2023- 24ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಳೆದ ಬಾರಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ಯಶಸ್ವಿಯಾಗಿ ಮಾಡಲಾಗಿತ್ತು, ಇದರಿಂದ ಜಿಲ್ಲೆಗೆ ರಾಜ್ಯ ಮಟ್ಟದಲ್ಲಿ ಒಳ್ಳೆಯ ಹೆಸರು ಬಂದಿತು, ಅದೇ ರೀತಿಯಲ್ಲಿ ಈ ಬಾರಿಯು ಜಿಲ್ಲಾಡಳಿತದ ಸಂಪೂರ್ಣ ಸಹಕಾರ ಸಂಘಕ್ಕೇ ನೀಡಲಾಗುವುದು ಎಂದರು.
ರಾಜ್ಯದ ಅನೇಕ ಕಡೆಯಲ್ಲಿ ಕ್ರೀಡಾಕೂಟ ನಡೆದ ಸಂದರ್ಭದಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆ ಇರುತ್ತದೆ, ಆದರೆ ನಮ್ಮ ಜಿಲ್ಲೆಯ ಸರ್ಕಾರಿ ನೌಕರರಲ್ಲಿ ಒಳ್ಳೆಯ ಪ್ರತಿಭಾವಂತ ಕ್ರೀಡಾಪಟುಗಳು ಇರುವುದು ಸಂತಸ, ಜಿಲ್ಲಾ ಮಟ್ಟದಲ್ಲಿ ಗೆದ್ದು ರಾಜ್ಯ ಮಟ್ಟದಲ್ಲೂ ಪ್ರಶಸ್ತಿ ಗೆದ್ದು ಬನ್ನಿ ಎಂದು ಕ್ರೀಡಾಪಟುಗಳಿಗೆ ಶುಭ ಹರಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್.ನರಸಿಂಹರಾಜು ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಗೆಲ್ಲುವುದಲ್ಲ, ಎಲ್ಲರೂ ಶಾಂತಿಯುತವಾಗಿ ಆಟ ಆಡಿ ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ ಆಗಿರುತ್ತದೆ, ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.

ಪ್ರತಿ ವರ್ಷ ಹೊಸ ಹೊಸ ರೀತಿಯಲ್ಲಿ ಕ್ರೀಡಾಕೂಟ ಮಾಡಲಾಗುತ್ತಿದೆ,ಎಲ್ಲಾ ಕ್ರೀಡಾಪಟುಗಳಿಗೆ ಎರಡು ದಿನ ಊಟದ ವ್ಯವಸ್ಥೆ ಮಾಡಲಾಗಿದೆ, ವೇಳಾಪಟ್ಟಿಯಲ್ಲಿ ನಿಯೋಜನೆ ಮಾಡಿರುವ ಸ್ಥಳಗಳಲ್ಲಿ ಸಮಯಕ್ಕೆ ಸರಿಯಾಗಿ ಆಟಗಳು ಪ್ರಾರಂಭ ಗೊಳ್ಳುತ್ತವೆ, ವೇಳಾಪಟ್ಟಿಯ ಪ್ರಕಾರ ಕ್ರೀಡಾ ಪಟುಗಳು ತಮ್ಮ ತಮ್ಮ ಆಟಗಳಲ್ಲಿ ಭಾಗವಹಿಸಬಹುದು ಮತ್ತು ಜಿಲ್ಲಾ ಮಟ್ಟದಲ್ಲಿ ಗೆದ್ದ ಅಭ್ಯರ್ಥಿಗಳನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಕಳುಹಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್.ಟಿ.ಆರ್, ರಾಜ್ಯ ಸರ್ಕಾರಿ ನೌಕರರ ಸಂಘ ಮಧುಗಿರಿ ಶೈಕ್ಷಣಿಕ ಜಿಲ್ಲೆ ಜಿಲ್ಲಾಧ್ಯಕ್ಷ ಜಯರಾಮಯ್ಯ.ಜಿ, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಕಾರ್ಯದರ್ಶಿ ಟಿ.ಎನ್. ಜಗದೀಶ್, ಖಜಾಂಚಿ ಲಕ್ಷ್ಮಿನರಸಿಂಹಯ್ಯ.ಬಿ.ಎನ್, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ರಾಜ್ಯ ಪರಿಷತ್ ಸದಸ್ಯ ನರಸಿಂಹಮೂರ್ತಿ.ಹೆಚ್.ಕೆ, ಕುಣಿಗಲ್ ತಾಲ್ಲೂಕು ಅಧ್ಯಕ್ಷ ವೆಂಕಟೇಶ್ .ಜಿ.ಆರ್, ಶಿರಾ ತಾಲ್ಲೂಕು ಅಧ್ಯಕ್ಷ ಬಿ.ಎಂ.ಲಕ್ಷ್ಮೀಶ, ತುರುವೇಕೆರೆ ತಾಲ್ಲೂಕು ಅಧ್ಯಕ್ಷ ಎನ್.ರಾಜು, ಚಿಕ್ಕನಾಯಕನ ಹಳ್ಳಿ ತಾಲ್ಲೂಕು ಅಧ್ಯಕ್ಷ ಆರ್.ಪರಶಿವಮೂರ್ತಿ, ಕೊರಟಗೆರೆ ತಾಲ್ಲೂಕು ಅಧ್ಯಕ್ಷ ಹೆಚ್.ಎಂ.ರುದ್ರೇಶ್, ಪಾವಗಡ ತಾಲ್ಲೂಕು ಅಧ್ಯಕ್ಷ ಜಿ.ಕಿರಣ್, ಗುಬ್ಬಿ ತಾಲ್ಲೂಕು ಅಧ್ಯಕ್ಷ ಕರುಣಾಕರಶೆಟ್ಟಿ.ಪಿ. ಸೇರಿದಂತೆ ಜಿಲ್ಲೆಯ ಸರ್ಕಾರಿ ನೌಕರ ಕ್ರೆಡಾ ಪಟುಗಳು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!