ತುಮಕೂರು: ನಗರದ ಚಿಕ್ಕಪೇಟೆಯ ಪುರಾತನ ಪ್ರಸನ್ನ ಗಂಗಾಧರೇಶ್ವರ ಸ್ವಾಮಿ ದೇವಸ್ಥಾನದ ವತಿಯಿಂದ ಮಾಘ ಪೂರ್ಣಿಮೆ ಅಂಗವಾಗಿ ಪಾರ್ವತಿ ಸಮೇತ ಪ್ರಸನ್ನ ಗಂಗಾಧರೇಶ್ವರ ಸ್ವಾಮಿ ರಥೋತ್ಸವ ವೈಭವದಿಂದ ನೆರವೇರಿತು.
ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅವರು ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು, ನೂರಾರು ವರ್ಷಗಳಿಂದ ಅದೇ ವಿಧಿವಿಧಾನಗಳೊಂದಿಗೆ ರಥೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ, ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪೂಜೆ ಸಲ್ಲಿಸಿದರು.
ಇದರ ಅಂಗವಾಗಿ ಬೆಳಗಿನಿಂದ ಪ್ರಸನ್ನ ಗಂಗಾಧರೇಶ್ವರ ಸ್ವಾಮಿ ಹಾಗೂ ಪಾರ್ವತಿ ದೇವಿ ದೇವಸ್ಥಾದಲ್ಲಿ ವಿಶೇಷ ಪೂಜೆ ಹಾಗೂ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು, ಮಧ್ಯಾಹ್ನ ಅಲಂಕೃತ ರಥದಲ್ಲಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ಪ್ರಮುಖ ರಸ್ತೆಗಳಲ್ಲಿ ಉತ್ಸವ ನಡೆಸಲಾಯಿತು.
ದೇವಸ್ಥಾನದ ಅರ್ಚಕ ವಿಶ್ವನಾಥ ದೀಕ್ಷಿತರು, ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ಎನ್.ಎಸ್.ಬಾಬು, ಮುಖಂಡರಾದ ಸುರೇಶ್, ಜಗದೀಶ್, ಕಿರಣ್, ಮಂಜುನಾಥ್, ಕಾರ್ತಿಕ್ ನಾಯಕ್ ಮೊದಲಾದವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಪ್ರಸನ್ನ ಗಂಗಾಧರೇಶ್ವರ ಸ್ವಾಮಿ ರಥೋತ್ಸವ
Get real time updates directly on you device, subscribe now.
Prev Post
Next Post
Comments are closed.