ತುಮಕೂರು: ಕೆ.ಬಿ.ಕ್ರಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಎನ್ ಹೆಚ್-73 ರಸ್ತೆಯ ಪಕ್ಕದಲ್ಲಿ ನಿರ್ಮಿಸಿರುವ ಬಾಕ್ಸ್ ಚರಂಡಿ ಮೇಲ್ಬಾಗದಲ್ಲಿ ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿಯನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 21ರಂದು ರಾತ್ರಿ ಸಮಯದಲ್ಲಿ ಮೃತಪಟ್ಟಿದ್ದು, ವಾರಸುದಾರರು ತಿಳಿದು ಬಂದಿರುವುದಿಲ್ಲ.
ಮೃತನು 5.5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲು ಮುಖ ಹೊಂದಿದ್ದು, ಮೃತನ ಮೈಮೇಲೆ ಬಿಳಿ ಬಣ್ಣದ ತುಂಬು ತೋಳಿನ ಷರ್ಟ್ ಹಾಗೂ ಕಪ್ಪು ಬಣ್ಣದ ಲುಂಗಿ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೂ. 08134- 262055, 251382, 254100, 0816- 2278000 ಯನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಅಪರಿಚಿತ ಸಾವು
Get real time updates directly on you device, subscribe now.
Next Post
Comments are closed.