ಪಾಕಿಸ್ತಾನ್ ಜಿಂದಾಬಾದ್ಗೆ ಬಿಜೆಪಿ ಕೆಂಡ

ಕಾಂಗ್ರೆಸ್ ದೇಶ ದ್ರೋಹಿಗಳನ್ನು ಬೆಂಬಲಿಸುತ್ತೆ ಎಂದು ಆಕ್ರೋಶ

23

Get real time updates directly on you device, subscribe now.


ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರ ದೇಶ ದ್ರೋಹಿಗಳನ್ನು ಬೆಂಬಲಿಸುತ್ತಿದೆ, ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶ ದ್ರೋಹಿ ವಿರುದ್ಧ ಕ್ರಮ ತೆಗೆದುಕೊಳ್ಳದೆ ರಕ್ಷಣೆ ಮಾಡುತ್ತಿದೆ ಎಂದು ಆಪಾದಿಸಿ ಸಂಸದ ಜಿ.ಎಸ್.ಬಸವರಾಜು ನೇತೃತ್ವದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರು, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಭದ್ರಮ್ಮ ವೃತ್ತದ ಜಿಲ್ಲಾ ಬಿಜೆಪಿ ಕಚೇರಿಯಿಂದ ಸಂಸದರ ಮುಂದಾಳತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಹೊರಟು ಸನಿಹದಲ್ಲೇ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನುಗ್ಗಲು ಪ್ರಯತ್ನಿಸಿದರು, ಡಿವೈಎಸ್ಪಿ ಕೆ.ಆರ್.ಚಂದ್ರಶೇಖರ್ ನೇತೃತ್ವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು, ಕಾಂಗ್ರೆಸ್ ಕಚೇರಿಗೆ ನುಗ್ಗುವ ಬಿಜೆಪಿ ಕಾರ್ಯಕರ್ತರನ್ನು ತಡೆದರು, ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ನೂಕಾಟ ತಳ್ಳಾಟ ನಡೆಯಿತು, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಎರಡು ವ್ಯಾನ್ ಗಳಲ್ಲಿ ತುಂಬಿಕೊಂಡು ಹೋದರು,
ಈ ವೇಳೆ ಮಾತನಾಡಿದ ಸಂಸದ ಜಿ.ಎಸ್.ಬಸವರಾಜು, ಕಾಂಗ್ರೆಸ್ ಸರ್ಕಾರ ದೇಶ ದ್ರೋಹಿಗಳನ್ನು ತನ್ನ ಮನೆಯಲ್ಲೇ ಇಟ್ಟುಕೊಂಡು ರಕ್ಷಣೆ ನೀಡುತ್ತಿದೆ, ರಾಜ್ಯ ಸರ್ಕಾರದ ಆಡಳಿತ ಮನೆಯಾದ ವಿಧಾನ ಸೌಧದಲ್ಲಿ ಕಿಡಿಗೇಡಿಯೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ, ಆ ಕಿಡಿಗೇಡಿಯನ್ನು ಬಂಧಿಸಿ ಅವನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು, ಇಂತಹ ಪ್ರಕರಣ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.

ಮತ ರಾಜಕಾರಣಕ್ಕಾಗಿ ದೇಶ ದ್ರೋಹಿಗಳ ಬೆಂಬಲಕ್ಕಿರುವ ಕಾಂಗ್ರೆಸ್ ನಾಯಕರ ಧೋರಣೆ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದಿದೆ, ದೇಶ ದ್ರೋಹಿಗಳನ್ನು ಬಗ್ಗು ಬಡಿಯದಿದ್ದರೆ ದೇಶದಲ್ಲಿ ದೊಡ್ಡ ಅನಾಹುತಗಳಾಗುವ ಅಪಾಯವಿದೆ, ಸರ್ಕಾರ ಇಂತಹವರನ್ನು ಮೊಳಕೆಯಲ್ಲೇ ಚುವುಟಿ ಹಾಕಬೇಕು ಎಂದರು.
ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ ಮಾತನಾಡಿ, ದೇಶ ದ್ರೋಹಿಗಳನ್ನು ಬೆಂಬಲಿಸುತ್ತಿರುವ ರಾಜ್ಯ ಕಾಂಗ್ರೆಸ್ ತೊಲಗಬೇಕು, ಶಕ್ತಿಸೌಧ ವಿಧಾನ ಸೌಧದಲ್ಲೇ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದರೂ ಕಾಂಗ್ರೆಸ್ ನವರು ಅವನ ಪರವಾಗಿ ನಿಂತಿದ್ದಾರೆ, ರಾಜ್ಯಸಭೆಗೆ ಆಯ್ಕೆಯಾದ ಪುಂಡರ ತಂಡದ ನಾಸಿರ್ ಹುಸೇನ್ ಗೆ ನಾಚಿಕೆಯಾಗಬೇಕು, ನಾಸಿರ್ ಹುಸೇನ್ ಹಾಗೂ ಅವರ ಬೆಂಬಲಿಗರನ್ನು ಕೂಡಲೇ ಬಂಧಿಸಿ ದೇಶದಿಂದ ಗಡಿಪಾರು ಮಾಡಬೇಕು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮರ್ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಬಿಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡರಾದ ಎಸ್.ಪಿ.ಚಿದಾನಂದ್, ನಗರ ಅಧ್ಯಕ್ಷ ಹನುಮಂತರಾಜು, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ನಗರ ಪಾಲಿಕೆ ಮಾಜಿ ಮೇಯರ್ ಬಿ.ಜಿ.ಕೃಷ್ಣಪ್ಪ, ಮಾಜಿ ಸದಸ್ಯರಾದ ಮಲ್ಲಿಕಾರ್ಜುನ್, ಸಿ.ಎನ್.ರಮೇಶ್, ವಿಷ್ಣುವರ್ಧನ್, ಮಂಜುನಾಥ್, ಜಿಲ್ಲಾ ಮಾಧ್ಯಮ ಪ್ರಮುಖ ಟಿ.ಆರ್.ಸದಾಶಿವಯ್ಯ, ಮುಖಂಡರಾದ ಹೆಚ್.ಎನ್.ಚಂದ್ರಶೇಖರ್,ರುದ್ರೇಶ್, ಬೆಳ್ಳಿ ಲೋಕೇಶ್, ರವೀಶಯ್ಯ, ಗಣೇಶ್, ವಿರೂಪಾಕ್ಷಪ್ಪ, ಚೇತನ್, ಕೆ.ವೇದಮೂರ್ತಿ, ವಕ್ತಾರ ಜಗದೀಶ್, ಪ್ರೇಮಾ ಹೆಗಡೆ, ಧನುಷ್, ಸತ್ಯಮಂಗಲ ಜಗದೀಶ್,ಬನಶಂಕರಿ ಬಾಬು, ಡಾ.ಫರ್ಜಾನಾ ರಹೀಂಜೀ, ಕೋಮಲಾ, ಜ್ಯೋತಿ ತಿಪ್ಪೇಸ್ವಾಮಿ, ರಾಮಣ್ಣ, ರಾಧಾ ಇತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!