ತುಮಕೂರು: ಬೆಂಗಳೂರಿನ ದಿ ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಆದಷ್ಟು ಶೀಘ್ರ ಬೇಧಿಸಿ ಆರೋಪಿ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಈ ಪ್ರಕರಣ ಬೇಧಿಸಲು 7-8 ಪೊಲೀಸ್ ಅಧಿಕಾರಿಗಳ ತಂಡ ರಚಿಸಲಾಗಿದೆ, ಸಿಸಿಬಿ ಜೊತೆಗೆ ಎನ್ಐಎ ನವರು ಸೇರಿಕೊಂಡು ಆರೋಪಿಯ ಶೋಧನಾ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದರು.
ಆರೋಪಿಯನ್ನು ಟ್ರ್ಯಾಕ್ ಮಾಡಲಾಗುತ್ತಿದ್ದು, ಆತ ಬಸ್ನಲ್ಲಿ ಪ್ರಯಾಣ ಮಾಡಿದ್ದಾನೆ ಎಂಬ ಮಾಹಿತಿ ಇದೆ, ಹಾಗಾಗಿ ಯಾವ ಯಾವ ದಿಕ್ಕಿನಲ್ಲಿ, ಮಾರ್ಗದಲ್ಲಿ ಹೋಗಿದ್ದಾನೆ ಎಂಬುದನ್ನು ಕಂಡು ಹಿಡಿಯಬೇಕಾಗಿದೆ, ಹಾಗಾಗಿ ಪೊಲೀಸರು ತುಮಕೂರಿನಲ್ಲಿ ಶೋಧನಾ ಕಾರ್ಯ ನಡೆಸಿದ್ದಾರೆ ಎಂದರು.
ತುಮಕೂರಿನ ಮೂಲಕ ಮುಂದೆ ಹೋಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ, ಹಾಗಾಗಿ ಎನ್ ಐ ಎ ತಂಡದವರು ಸಿಸಿಟಿವಿ ಫುಟೇಜ್ ಪರಿಶೀಲನೆ ನಡೆಸಿದ್ದು, ತನಿಖಾ ಕಾರ್ಯ ಮುಂದುವರೆಸಿದ್ದಾರೆ ಎಂದು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಬಂಧಿಸಿಲ್ಲ, ಬದಲಾಗಿ ಅವರನ್ನು ಕರೆದು ವಿಚಾರಣೆ ನಡೆಸಲಾಗಿದೆ ಅಷ್ಟೇ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸುತ್ತಿದೆ, ಹಾಗಾಗಿ ದಲಿತ ಮುಖ್ಯಮಂತ್ರಿ ಬಗ್ಗೆ ಮಾತನಾಡುವುದು ಅಷ್ಟೊಂದು ಪ್ರಸ್ತುತವಲ್ಲ ಎಂದು ಪ್ರತಿಕ್ರಿಯಿಸಿದರು.
ಲೋಕಸಭಾ ಚುನಾವಣೆಗೆ ಟಿಕೆಟ್ ಸಿಇಸಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ತೆಗೆದುಕೊಂಡು ಹೋಗಲಿದ್ದಾರೆ, ದೆಹಲಿಯಲ್ಲಿ ಹೈಕಮಾಂಡ್ ಅಭ್ಯರ್ಥಿಗಳ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಎನ್ನುವುದನ್ನು ಅಂತಿಮಗೊಳಿಸಲಿದೆ, ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯವರು ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರ ನನಗೆ ಗೊತ್ತಿಲ್ಲ ಎಂದು ಹೇಳಿದರು.
ಹೆಚ್ಚುವರಿ ಕೌಂಟರ್
ಜಿಲ್ಲೆಯಲ್ಲಿ ಕೊಬ್ಬರಿ ಖರೀದಿಯ ನಾಫೆಡ್ ಕೇಂದ್ರಗಳ ಮುಂದೆ ಮಹಿಳೆಯರು ರಾತ್ರಿಯೆಲ್ಲಾ ಸರದಿಯ ಸಾಲಿನಲ್ಲಿ ನಿಂತು ಕಷ್ಟಪಡುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ, ಹಾಗಾಗಿ ಇನ್ನು 2-3 ಹೆಚ್ಚುವರಿ ಕೌಂಟರ್ಗಳನ್ನು ತೆರೆಯಲು ನಾಫೆಡ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ನಮ್ಮ ಜಿಲ್ಲೆಯಲ್ಲಿ ಹೆಚ್ಚು ಕೊಬ್ಬರಿ ಖರೀದಿ ಮಾಡಲಾಗುತ್ತಿಲ್ಲ ಎಂಬ ಬಗ್ಗೆ ದೂರು ಕೇಳಿ ಬಂದಿದ್ದವು, ಈ ಬಗ್ಗೆಯೂ ನಾನು ಅಧಿಕಾರಿಗಳಿಗೆ ಸೂಚನೆ ನೀಡಿ, ಹೆಚ್ಚು ಕೊಬ್ಬರಿ ಖರೀದಿಸುವಂತೆ ತಿಳಿಸಿದ್ದೇನೆ ಎಂದರು.
ಪಾಸ್ಪೋರ್ಟ್ ಫೋಟ್
Comments are closed.