ಕ್ರೀಡೆ ಎಲ್ಲರನ್ನು ಒಟ್ಟುಗೂಡಿಸುತ್ತೆ: ಡಾ.ಪರಮೇಶ್ವರ್

ಅಖಿಲ ಭಾರತ ಅಂತರ್ ವಿವಿ ಪುರುಷರ ನೆಟ್ ಬಾಲ್ ಚಾಂಪಿಯನ್ಶಿಪ್ ಗೆ ಚಾಲನೆ

39

Get real time updates directly on you device, subscribe now.


ತುಮಕೂರು: ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಸಾಹೇ) ಇದೇ ಪ್ರಥಮ ಬಾರಿಗೆ ತುಮಕೂರಿನಲ್ಲಿ ಅಖಿಲ ಭಾರತ ಅಂತರ ವಿಶ್ವ ವಿದ್ಯಾಲಯ ಪುರುಷ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿಗೆ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ರೆಡಾಂಗಣದಲ್ಲಿ ಚಾಲನೆ ನೀಡಲಾಗಿದೆ.

ಗೃಹ ಸಚಿವ ಹಾಗೂ ಸಾಹೇ ವಿಶ್ವ ವಿದ್ಯಾಲಯದ ಕುಲಾಧಿಪತಿ ಡಾ.ಜಿ.ಪರಮೇಶ್ವರ ಧ್ವಜಾರೋಹಣ ನೆರವೇರಿಸುವುದರ ಮೂಲಕ ಅಖಿಲ ಭಾರತ ಅಂತರ ವಿಶ್ವ ವಿದ್ಯಾಲಯ ಪುರುಷ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿಗೆ ಚಾಲನೆ ನೀಡಿದರು.
ಮಧ್ಯ ಪ್ರದೇಶದ ಏಕಲವ್ಯ ವಿಶ್ವವಿದ್ಯಾಲಯ, ರಾಣಿ ಚೆನ್ನಮ್ಮ, ಬೆಂಗಳೂರು, ಕರ್ನಾಟಕ, ದಾವಣಗೆರೆ, ಮಂಗಳೂರು ವಿಶ್ವವಿದ್ಯಾಲಯ, ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯ, ಶಾತವಾಹನ ವಿಶ್ವವಿದ್ಯಾಲಯ, ಆಂಧ್ರದ ವಿಶ್ವ ವಿದ್ಯಾಲಯ, ರಾಜಸ್ಥಾನ, ಪುಣೆ, ಒಡಿಶಾ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳ ವಿಶ್ವ ವಿದ್ಯಾಲಯಗಳು ಪಥ ಸಂಚಲನದ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತಂದವು.

ಈ ವೇಳೆ ಗೃಹ ಸಚಿವ ಹಾಗೂ ಸಾಹೇ ವಿವಿ ಕುಲಾಧಿಪತಿ ಡಾ.ಜಿ.ಪರಮೇಶ್ವರ ಮಾತನಾಡಿ, ಸಾಹೇ ವಿವಿಯಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದ್ದು, ವಿವಿಧ ರಾಜ್ಯಗಳಿಂದ ಆಗಮಿಸಿರುವ ತಂಡಗಳಿಗೆ ಶುಭ ಕೋರಿದರು.
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ನೆಟ್ ಬಾಲ್ ಚಾಂಪಿಯನ್ಶಿಪ್ ಆಯೋಜಿಸಿರುವುದು ಸಂತಸದ ವಿಷಯ, ಪಂದ್ಯಾವಳಿಗೆ 53 ತಂಡ ಆಗಮಿಸಿವೆ, ಕ್ರೀಡೆ ಅಂದ ಮೇಲೆ ಗೆಲುವು ಸೋಲು ಸಹಜ, ಆದರೆ ಕ್ರೀಡೆಯಲ್ಲಿ ಭಾಗವಹಿಸುವುದು ಬಹಳ ಮುಖ್ಯ, ಮೊದಲ ನಾಲ್ಕು ಗೆದ್ದ ತಂಡಗಳಿಗೆ ಬಹುಮಾನ ನೀಡಲಾಗುವುದು ಎಂದರು.
ಬಾಲ್ಯದಲ್ಲಿ ಆಟವಾಡಿದ ಆಟಗಳ ನೆನಪಾಗುತ್ತಿದೆ ಎಂದ ಅವ
ರು ಅಂತರ್ ರಾಜ್ಯ ಒಲಂಪಿಕ್ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ನೆನಪುಗಳನ್ನು ಮೆಲುಕು ಹಾಕಿದರು, ಜೊತೆಗೆ ಕ್ರೀಡೆ ಎನ್ನುವಂತಹದ್ದು ಎಲ್ಲರನ್ನು ಒಟ್ಟುಗೂಡಿಸುತ್ತದೆ, ಇದು ಐಕ್ಯತೆಯ ಸಂಕೇತವಾಗಿದೆ ಎಂದು ಎಲ್ಲಾ ಕ್ರೀಡಾ ಪಟುಗಳಿಗು ಶುಭ ಹಾರೈಸಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಯ ಸದಸ್ಯೆ ಕನ್ನಿಕಾ ಪರಮೇಶ್ವರಿ, ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಸಾಹೇ ವಿವಿಯ ಉಪ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಸಾಹೇ ವಿವಿಯ ಕುಲಾಧಿಪತಿ ಸಲಹೆಗಾರ ಡಾ.ವಿವೇಕ್ ವೀರಯ್ಯ, ಸಾಹೇ ವಿವಿ ರಿಜಿಸ್ಟ್ರಾರ್ ಡಾ.ಎಂ.ಎಝೆಡ್ ಕುರಿಯನ್, ಶ್ರೀಸಿದ್ಧಾರ್ಥ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಸಾಣೆಕೊಪ್ಪ, ಶ್ರೀಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್ ಬಿ ಕುಡ್ವ, ಎಸ್ ಎಸ್ ಐ ಆರ್ ಎಂ ಎಸ್ ಪ್ರಾಂಶುಪಾಲ ಡಾ.ದಿವಾಕರ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್.ರವಿಪ್ರಕಾಶ, ತುಮಕೂರಿನ ಜಿಲ್ಲಾ ಪಂಚಾಯತ್ ನ ಸಿ ಇ ಒ ಪ್ರಭು, ಉಡುಪಿಯ ಸುಕುಮಾರ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಶಶಿಕುಮಾರ್.ಕೆ, ಸಾಹೇ ವಿಶ್ವ ವಿದ್ಯಾಲಯದ ಪರೀಕ್ಷಾ ನಿಯಂತ್ರಣ ಮಂಡಳಿಯ ಅಧ್ಯಕ್ಷ ಡಾ.ಗುರುಶಂಕರ್ ಸೇರಿದಂತೆ ಸಾಹೇ ವಿವಿಯಲ್ಲಿ ಬರುವ ಎಲ್ಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!