ಬೈಕ್ ರ್ಯಾಲಿ ನಡೆಸಿ ಮತದಾನ ಅರಿವು

39

Get real time updates directly on you device, subscribe now.


ಕುಣಿಗಲ್: ಕಡ್ಡಾಯ ಮತದಾನ ಉತ್ತೇಜಿಸುವ ನಿಟ್ಟಿನಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಇಒ ನೇತೃತ್ವದಲ್ಲಿ ತಾಪಂ ಸಿಬ್ಬಂದಿ, ವಿವಿಧ ಗ್ರಾಮ ಪಂಚಾಯಿತಿ ಪಿಡಿಒ ಸಿಬ್ಬಂದಿ ಪಟ್ಟಣದಲ್ಲಿ ಬೈಕ್ರ್ಯಾಲಿ ನಡೆಸಿ ಅರಿವು ಮೂಡಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ರ್ಯಾಲಿಗೆ ಸಹಾಯಕ ಚುನವಣಾಧಿಕಾರಿ ಮಹೇಶ್ ಚಾಲನೆ ನೀಡಿದರು, ಕಡ್ಡಾಯ ಮತದಾನದ ಬಗ್ಗೆ ಅರಿವು ಮೂಡಿಸುವ ಭಿತ್ತಿಪತ್ರ ಹಿಡಿದ ಗ್ರಾಪಂ, ತಾಪಂ ಸಿಬ್ಬಂದಿ ಪಟ್ಟಣದ ಮುಖ್ಯರಸ್ತೆಯಲ್ಲಿ ಘೋಷಣೆ ಕೂಗುತ್ತಾ ತಾಲೂಕು ಪಂಚಾಯಿತಿ ಕಚೇರಿವರೆಗೂ ಆಗಮಿಸಿದರು, ರ್ಯಾಲಿಗೆ ವಿವಿಧ ಜನಪದ ಕಲಾ ತಂಡಗಳು ಪಾಲ್ಗೊಂಡು ಮೆರುಗು ಹೆಚ್ಚಿಸಿದವು, ರ್ಯಾಲಿಯಲ್ಲಿ ಪಾಲ್ಗೊಂಡವರು ಚುನಾವಣಾ ಪರ್ವ ದೇಶದ ಗರ್ವ ಎಂಬ ಘೋಷ ವಾಕ್ಯ ಕೂಗುತ್ತಾ ಮತದಾರರಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮ ಕುರಿತು ಮಾಹಿತಿ ನೀಡಿದ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಮುನಿಯಪ್ಪ, ಏಪ್ರಿಲ್ 26ರಂದು ತಾಲೂಕಿನಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ, ಚುನಾವಣೆಗಳು ಪ್ರಜಾತಂತ್ರದ ಹಬ್ಬವಾಗಿದ್ದು, ಅರ್ಹ ಮತದಾರರು ಯಾವುದೇ ಆಮೀಷಗಳಿಗೆ ಒಳಗಾಗದೆ ತಮ್ಮ ಸಂವಿಧಾನ ಬದ್ದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾತಂತ್ರದ ಹಬ್ಬದಲ್ಲಿ ಪಾಲ್ಗೊಳ್ಳಬೇಕು, ಮತದಾನ ಪ್ರಕ್ರಿಯೆಯ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ತಾಲೂಕಿನಾದ್ಯಂತ ಇನ್ನು ಏಳು ದಿನಗಳ ಕಾಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು, ಮತದಾರರು ಮತದಾನದ ದಿನಾಂಕದಂದು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಳವಾಗುವ ನಿಟ್ಟಿನಲ್ಲಿ ಕೊಡುಗೆ ನೀಡಬೇಕು ಎಂದರು.
ಮತದಾನದ ಬಗ್ಗೆ ಅರಿವು ಮೂಡಿಸುವ ವಿವಿಧ ರೀತಿಯ ಭಿತ್ತಪತ್ರಗಳನ್ನು ಪ್ರದರ್ಶಿಸಲಾಯಿತು, ನರೇಗ ಸಹಾಯಕ ನಿರ್ದೇಶಕ ಸುರೇಶ, ಪಿಡಿಒ ಚಂದ್ರಹಾಸ್ ಸೇರಿದಂತೆ ಇತರೆ ಪಿಡಿಒಗಳು, ಪುರಸಭೆ ಮುಖ್ಯಾಧಿಕಾರಿ ಮಂಜುಳಾ ಪಾಲ್ಗೊಂಡಿದ್ದರು.

Get real time updates directly on you device, subscribe now.

Comments are closed.

error: Content is protected !!