ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಿ: ಡೀಸಿ

ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬವಿದ್ದಂತೆ

24

Get real time updates directly on you device, subscribe now.


ತುಮಕೂರು: ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬವಿದ್ದಂತೆ, ಈ ಹಬ್ಬದಲ್ಲಿ ಪ್ರತಿಯೊಬ್ಬರೂ ತಪ್ಪದೆ ಭಾಗವಹಿಸಿ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ನಡೆದ 2024ರ ಲೋಕ ಸಭಾ ಚುನಾವಣೆ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮತ ಚಲಾಯಿಸುವ ಮೂಲಕವೇ ನಾವೆಲ್ಲರೂ ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಭಾಗವಹಿಸಲು ಸಾಧ್ಯ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಎಲ್ಲರೂ ಮತದಾನ ಮಾಡುವಂತೆ ತಿಳಿಸಬೇಕು, ಯಾವುದೇ ಆಮಿಷಕ್ಕೆ ಬಲಿಯಾಗದೆ, ಮತ ಚಲಾಯಿಸುವ ಮೂಲಕ ದೇಶದ ಅಭವೃದ್ಧಿಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.
ಆನ್ಲೈನ್ ಅಪ್ಲಿಕೇಶನ್ ಮತ್ತು 1950 ಹೆಲ್ಪ್ಲೈನ್ ಸಂಖ್ಯೆಗೆ ಕರೆ ಮಾಡುವ ಮೂಲಕ ಯಾರಾದರೂ ಆಮಿಷಗಳನ್ನು ಒಡ್ಡುತ್ತಿದ್ದರೆ ಅಥವಾ ಮತದಾನಕ್ಕೆ ಅಡ್ಡಿ ಪಡಿಸುತ್ತಿದ್ದರೆ ದೂರು ದಾಖಲು ಮಾಡಬಹುದಾಗಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ವಿಶ್ವದಲ್ಲಿ ಶೇ.55 ಆಡಳಿತ ದೇಶಗಳು ಪ್ರಜಾ ಪ್ರಭುತ್ವವನ್ನು ಆಯ್ಕೆ ಮಾಡಿಕೊಂಡಿದೆ, ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ದೇಶವನ್ನು ಸದೃಢವಾಗಿ ಮುನ್ನಡೆಸಲು ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಕಾರ್ಯ ನಿರ್ವಹಿಸುತ್ತಿವೆ, ಉತ್ತಮ ಶಾಸಕಾಂಗ ರಚನೆ ಆಗಬೇಕೆಂದರೆ ಪ್ರತಿಯೊಬ್ಬರೂ ಮತದಾನ ಮಾಡುವುದು ಅತ್ಯಗತ್ಯ, ಕಳೆದ ಬಾರಿ ಕಡಿಮೆ ಪ್ರಮಾಣದಲ್ಲಿ ಮತದಾನ ನಡೆದಿದ್ದು, ಈ ಬಾರಿ ಶೇ.100 ರಷ್ಟು ಮತದಾನ ಆಗುವಂತೆ ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ನಂತರ ಮಕ್ಕಳೊಂದಿಗೆ ಸಂವಾದ ನಡೆಸಿದ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ. ಅವರು ಜಾಗೃತಿ ಜಾಥಾ ಕಾರ್ಯಕ್ರಮದ ಉದ್ದೇಶ ಮತ್ತು ಮತದಾನ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಾ ನಗರ ಪಾಲಿಕೆ ಆಯುಕ್ತರಾದ ಅಶ್ವಿಜ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗಧಾಮಯ್ಯ, ಕೃಷಿ ಇಲಾಖೆ ಉಪ ನಿರ್ದೇಶಕ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಲಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!