ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟದಿರಲಿ

32

Get real time updates directly on you device, subscribe now.


ತುಮಕೂರು: ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟಬಾರದು, ಬೋಧಕ- ಬೋಧಕೇತರ ಸಿಬ್ಬಂದಿ ಆಲಸ್ಯ, ನಕಾರಾತ್ಮಕ ಮನೋಭಾವಗಳಿಂದ ಹೊರಬರ ಬೇಕು ಎಂದು ತುಮಕೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು.
ತುಮಕೂರು ವಿಶ್ವ ವಿದ್ಯಾಲಯ ಆಯೋಜಿಸಿದ್ದ 21ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಸಮಾನ ಮನಸ್ಕರಿಂದ ಗುಣಮಟ್ಟದ ವಿಶ್ವ ವಿದ್ಯಾಲಯ ಕಟ್ಟಲು ಸಾಧ್ಯ, ಬೋಧಕ- ಬೋಧಕೇತರ ಸಿಬ್ಬಂದಿ ಸಹಭಾಗಿತ್ವ ವಿವಿಗಳನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯಲಿದೆ ಎಂದರು.

ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದಾಗ ಶಿಕ್ಷಕನಿಂದ ಶಿಕ್ಷಣಕ್ಕೊಂದು ಅರ್ಥ ಬರುತ್ತದೆ, ವಿವಿಗಳು ಸಂಶೋಧನಾಧಾರಿತ ಶಿಕ್ಷಣಕ್ಕೆ ಒತ್ತು ಕೊಡಬೇಕು, ವಿವಿಯು ನ್ಯಾಕ್ ಮಾನ್ಯತೆಯಲ್ಲಿ ಎ+ ಶ್ರೇಣಿ ಗಳಿಸಿದರೆ ಅನುಧಾನ ಯತೇಚ್ಛವಾಗಿ ಸಿಗಲಿದೆ, ಇವೆಲ್ಲ ಸಾಧನೆಗೂ ಪ್ರಾಧ್ಯಾಪಕರ ನಡುವೆ ಗುಣಮಟ್ಟ ಸಂಬಂಧವಿರಬೇಕು, ಸಕಾರಾತ್ಮಕ ವಿಷಯ ಸ್ವೀಕರಿಸುವ ಮನೋಭಾವ ಇರಬೇಕು ಎಂದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಬಿಸಿ ಊಟದ ಯೋಜನೆಯಿಂದಾಗಿ ಶೇ.47 ರಷ್ಟಿದ್ದ ವಿವಿ ಫಲಿತಾಂಶ ಶೇ.51ಕ್ಕೆ ಏರಿಕೆಯಾಗಿದೆ, ಈ ಯೋಜನೆಯಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದ ಮೇಲೆ ಹೆಚ್ಚು ಗಮನ ಹರಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ. ಪ್ರಸನ್ನಕುಮಾರ್ ಮಾತನಾಡಿ, ವಿವಿಯ ಬಿಸಿ ಊಟದ ಯೋಜನೆಯಿಂದ ಗ್ರಾಮೀಣ ಭಾಗದ 1500 ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ, ಇದರ ಸಕಾರಾತ್ಮಕ ಪರಿಣಾಮ ಶಿಕ್ಷಣದ ಮೇಲೆ ಆಗಲಿದೆ ಎಂದರು.

ವಿವಿ ವಾಣಿಜ್ಯ ನಿಕಾಯದ ಡೀನ್ ಪ್ರೊ.ಬಿ.ಶೇಖರ್, ವಿಜ್ಞಾನ ನಿಕಾಯದ ಡೀನ್ ಪ್ರೊ.ಮನೋಹರ್ ಶಿಂಧೆ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಕಾಶ್ ಎಂ.ಶೇಟ್, ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ, ಸಹಾಯಕ ಪ್ರಾಧ್ಯಾಪಕಿ ಡಾ.ಬಿ.ಎನ್.ಹೇಮಾವತಿ, ಡಾ.ಜ್ಯೋತಿ ಮತ್ತು ಬೋಧಕೇತರ ಸಿಬ್ಬಂದಿ ಲಕ್ಮೀಪತಿ ಇಲ್ಲಿಯ ವರೆಗಿನ ತುಮಕೂರು ವಿವಿಯ ಕುಲಪತಿಗಳ, ಕುಲಸಚಿವರ ಕಾರ್ಯ ಸ್ಮರಿಸಿದರು.
ಸಂಸ್ಥಾಪನಾ ದಿನಾಚರಣೆ ಸಮಿತಿ ಸಂಚಾಲಕ ಡಾ.ಎ.ಎಂ. ಮಂಜುನಾಥ್, ಪ್ರಾಧ್ಯಾಪಕ ಪ್ರೊ.ಬಿ.ರಮೇಶ್, ಪ್ರೊ.ಬಿ.ಟಿ.ಸಂಪತ್ ಕುಮಾರ್ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!