ಕಣಿವೆ ನರಸಿಂಹ ಸ್ವಾಮಿಯ ಅದ್ದೂರಿ ಬ್ರಹ್ಮರಥೋತ್ಸವ

23

Get real time updates directly on you device, subscribe now.


ಪಾವಗಡ: ಪಟ್ಟಣದ ಐತಿಹಾಸಿಕ ಶ್ರೀಉದ್ಬವ ಕಣಿವೆ ಲಕ್ಷ್ಮೀನರಸಿಂಹ ಸ್ವಾಮಿಯ 68ನೇ ಬ್ರಹ್ಮರಥೋತ್ಸವ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಹಾಗೂ ಸಡಗರದಿಂದ ನಡೆಯಿತು.
ಲಕ್ಷ್ಮೀನರಸಿಂಹ ಸ್ವಾಮಿಯ ಬ್ರಹ್ಮ ರಥೋತ್ಸವದ ಅಂಗವಾಗಿ ಸೋಮವಾರ ಮುಂಜಾನೆಯಿಂದಲೇ ಧಾರ್ಮಿಕ ಪೂಜಾ ಕೈಂಕರ್ಯಕ್ಕೆ ಚಾಲನೆ ನೀಡಲಾಗಿತ್ತು, ಉದ್ಬವ ಮೂರ್ತಿ ಸೇರಿದಂತೆ ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ಮತ್ತು ಅಭಿಷೇಕ ನೆರವೇರಿಸಲಾಗಿತು, ಸುಡು ಬಿಸಿಲನ್ನೂ ಲೆಕ್ಕಿಸದೆ ಭಕ್ತರು ತಂಡೋಪ ತಂಡವಾಗಿ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.

ರಥ ಹಾಗೂ ದೇವಸ್ಥಾನಕ್ಕೆ ವಿಶೇಷ ಹೂವಿನ ಅಲಂಕಾರ ನೆರವೇರಿಸಲಾಗಿತ್ತು, ಪಾಲ್ಗುಣ ಶುದ್ಧ ಪೌರ್ಣಮಿಯ ಸೋಮವಾರ ಮಧ್ಯಾನ 12.45ಕ್ಕೆ ಶುಭ ಅಭಿಜಿನ್ ಲಗ್ನದಲ್ಲಿ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂರಿಸಿ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಸಾಂಪ್ರದಾಯಿಕವಾಗಿ ಚಾಲನೆ ನೀಡಲಾಯಿತು.

ರಥೋತ್ಸವದ ವೇಳೆ ತಾಲೂಕು ಚುನಾವಣಾ ಸ್ವೀಪ್ ಸಮಿತಿ, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ವತಿಯಿಂದ ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಮತದಾನ ಮಾಡುವಂತೆ ವಿವಿಧ ಕಲಾ ತಂಡಗಳೊಂದಿಗೆ ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ವಿಶೆಷ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ನರಸಿಂಹ ಗೋಪಾಲ್, ಉಪ ತಹಶೀಲ್ದಾರ್ ಎನ್.ಮೂರ್ತಿ, ತಾಪಂ ಇಒ ಜಾನಕಿರಾಮ್, ಪುರಸಭೆ ಮುಖ್ಯಾಧಿಕಾರಿ ಷಂಶುದ್ದೀನ್, ರಾಜಗೋಪಾಲ್, ಪಿಡಿಒ ವಿಜಯಕುಮಾರ್, ಶ್ರೀಕಣಿವೆ ಲಕ್ಷ್ಮೀನರಸಿಂಹ ಸ್ವಾಮಿ ಸೇವಾ ಸಮಿತಿ ಪದಾಧಿಕಾರಿಗಳು ಹಾಗೂ ಸಾವಿರಾರು ಭಕ್ತರು ಇದ್ದರು.

Get real time updates directly on you device, subscribe now.

Comments are closed.

error: Content is protected !!