ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದಾಗ ವಿದ್ಯಾರ್ಥಿ ಸಾವು

63

Get real time updates directly on you device, subscribe now.


ತುರುವೇಕೆರೆ: ಪಟ್ಟಣದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯೊಬ್ಬ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಮೃತ ವಿದ್ಯಾರ್ಥಿ ಚಿಕ್ಕನಾಯಕನ ಹಳ್ಳಿ ತಾಲ್ಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಮಗ ಮೋಹನ್ ಕುಮಾರ್.ಸಿ.ಎಸ್. (16) ಎಂದು ಗುರುತಿಸಲಾಗಿದೆ, ಮೃತ ವಿದ್ಯಾರ್ಥಿ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ ನ ಶ್ರೀಕಂಚಿರಾಯ ಸನಿವಾಸ ಪ್ರೌಢ
ಶಾಲೆಯ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದು ಬಂದಿದೆ.

ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಿಕಾ ಪ್ರೌಢ ಶಾಲಾ ಪರೀಕ್ಷಾ ಕೇಂದ್ರದಲ್ಲಿ ಮೋಹನ್ ಕುಮಾರ್.ಸಿ.ಎಸ್. ಸೋಮವಾರ ಬೆಳಗ್ಗೆ ಪ್ರಥಮ ಭಾಷೆ ಕನ್ನಡ ವಿಷಯ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದಾನೆ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ, ಕೆಲ ಸಮಯದ ನಂತರ ಮತ್ತೆ ತೀವ್ರ ಅಸ್ಪಸ್ಥಗೊಂಡಿದ್ದರಿಂದ ವೈದ್ಯರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಶಿಕ್ಷಕರಿಗೆ ತಿಳಿಸಿದ್ದಾರೆ, ತಕ್ಷಣ ಆ್ಯಂಬ್ಯುಲ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಗುಬ್ಬಿ ಸಮೀಪ ಸಾವನ್ನಪ್ಪಿದ್ದರಿಂದ ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊಂಡೊಯ್ದಿದ್ದಾರೆ.

ಅದೇ ಮಧ್ಯಾಹ್ನ ಹುಲ್ಲೇಕೆರೆಯ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಪ್ರೌಢ ಶಾಲಾ ವಿಭಾಗದ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಮತ್ತೋರ್ವ ವಿದ್ಯಾರ್ಥಿ ರೋಹಿತ್ ಅಸ್ವಸ್ಥಗೊಂಡಿದ್ದರಿಂದ ದಂಡಿನಶಿವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ
ಮತ್ತೆ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿದೆಂದು ಇಲಾಖಾ ಮೂಲಗಳಿಂದ ತಿಳಿದು ಬಂದಿದೆ.
ಈ ಬಾರಿ ಪರೀಕ್ಷಾ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆಯಿಂದ ಮಕ್ಕಳು ಭಯ ಭೀತರಾಗಿ ಅಸ್ವಸ್ಥಗೊಳ್ಳುತ್ತಿರುವುದು ಸಾವಿಗೆ ಕಾರಣವಾಗುತ್ತಿದೆಂದು ಪೋಷಕರು, ಶಿಕ್ಷಕರೊಬ್ಬರು ದೂರಿದರು.

Get real time updates directly on you device, subscribe now.

Comments are closed.

error: Content is protected !!