ರಸಗೊಬ್ಬರದ ಬೆಲೆ ಇಳಿಸಲು ಚಂದ್ರಣ್ಣ ಆಗ್ರಹ

387

Get real time updates directly on you device, subscribe now.

ಹುಳಿಯಾರು: ರಸಗೊಬ್ಬರದ ಬೆಲೆ 1 ಕ್ವಿಂಟಾಲ್ಗೆ 700 ರೂ. ವರೆಗೆ ಏರಿಕೆಯಾಗಿದ್ದು, ರೈತರಿಗೆ ಹೊರೆಯಾಗಿದೆ, ರಸಗೊಬ್ಬರದ ಬೆಲೆ ಇಳಿಸಲು ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಆಗ್ರಹಿಸಿದರು.
ಕೋವಿಡ್ ಸಂಕಷ್ಟಕ್ಕೆ ಸಿಲುಕಿ ರೈತರು ಈಗಾಗಲೇ ಹೈರಾಣಾಗಿದ್ದಾರೆ, ಅವರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಇಂತಹ ಸಂದರ್ಭದಲ್ಲಿ ಏಕಾಏಕಿ ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ, ಬೆಲೆ ಏರಿಕೆ ನಿಯಂತ್ರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ, ಸರ್ಕಾರದ ನೀತಿಗಳು ಬಹುರಾಷ್ಟ್ರಿಯ ಕಂಪನಿಗಳ ಪರವಾಗಿದೆ, ಈ ಕೂಡಲೇ ರಸಗೊಬ್ಬರದ ಬೆಲೆ ಇಳಿಕೆ ಮಾಡಬೇಕು, ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

Get real time updates directly on you device, subscribe now.

Comments are closed.

error: Content is protected !!