ಲೋಕಸಭಾ ಚುನಾವಣೆ- 2 ನಾಮಪತ್ರ ಸಲ್ಲಿಕೆ

43

Get real time updates directly on you device, subscribe now.


ತುಮಕೂರು: ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಮೊದಲನೇ ದಿನ ಇಬ್ಬರು ಪಕ್ಷೇತರ ಅಭ್ಯರ್ಥಿಗಳಿಂದ ಒಟ್ಟು 2 ನಾಮಪತ್ರ ಸಲ್ಲಿಕೆಯಾಗಿವೆ.
ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ತುಮಕೂರು ನಗರ ಕೆ.ಆರ್.ಬಡಾವಣೆಯ ಪ್ರಕಾಶ್ ಆರ್.ಎ.ಜೈನ್ (49) ಹಾಗೂ ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿ ಸಂಕೇನಹಳ್ಳಿಯ ಆರ್.ನಾರಾಯಣಪ್ಪ (57) ಪಕ್ಷೇತರ ಅಭ್ಯರ್ಥಿಗಳಾಗಿ ಮಾರ್ಚ್ 28 ರಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಮೂನೆ-26 (100 ರೂ.ಗಳ ಛಾಪಾ ಕಾಗದದಲ್ಲಿ) ನ್ನು ಕೂಲಂಕುಷವಾಗಿ ಪರಿಶೀಲಿಸಿ ನಮೂನೆಯ ಎಲ್ಲಾ ಕಾಲಂಗಳನ್ನು ಭರ್ತಿ ಮಾಡಿರಬೇಕು, ನಮೂನೆಯ ಪ್ರತಿಯೊಂದು ಪುಟಕ್ಕೂ ಅಭ್ಯರ್ಥಿಯು ಸಹಿ ಮಾಡಿ ನೋಟರಿ ಮಾಡಿಸಿರಬೇಕು, ಪ್ರತಿಯೊಬ್ಬ ಅಭ್ಯರ್ಥಿಗೂ ಗರಿಷ್ಟ 95,00,000 ರೂ. ವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿದ್ದು, ಅಭ್ಯರ್ಥಿಯು ಕಡ್ಡಾಯವಾಗಿ ಸಮರ್ಪಕ ವೆಚ್ಚಗಳ ಮಾಹಿತಿ ಸಲ್ಲಿಸತಕ್ಕದ್ದು ಎಂದು ಸೂಚಿಸಿದ್ದಾರೆ.
ಚುನಾವಣಾಧಿಕಾರಿಗಳ ಕಚೇರಿಯ 100 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಗುರುತಿಸಿ ಸಿ ಆರ್ ಪಿ ಸಿ 144 ರನ್ವಯ ನಿರ್ಬಂಧಕಾಜ್ಞೆ ಜಾರಿ ಮಾಡಲಾಗಿದ್ದು, ನಾಮಪತ್ರ ಸಲ್ಲಿಸುವಾಗ ಕೇವಲ ಅಭ್ಯರ್ಥಿ ಮತ್ತು 4 ಜನ (ಒಟ್ಟು 5 ಮಂದಿ) ರಿಗೆ ಮಾತ್ರ ಪ್ರವೇಶಿಸಲು ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!