ಕೊವಿಡ್- 19 ಲಸಿಕಾ ಉತ್ಸವ

153

Get real time updates directly on you device, subscribe now.

ಮಧುಗಿರಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನದ ಮೇರೆಗೆ ಕೊವಿಡ್- 19 ಲಸಿಕಾ ಉತ್ಸವಕ್ಕೆ ಪಟ್ಟಣದ ಟಿವಿವಿ ಕಾಲೇಜ್ ನಲ್ಲಿ ಸಾಂಕೇತಿಕವಾಗಿ ಲಸಿಕೆ ನೀಡುವುದರ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಡಾ.ರಮೇಶ್ ಬಾಬು, ಪುರಸಭೆಯ ಮುಖ್ಯಾಧಿಕಾರಿ ಅಮರ್ ನಾರಾಯಣ್, ಮಂಜುನಾಥ್, ದರ್ಶನ್ಗೌಡ, ಡಾ.ಶಿಲ್ಪಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಧುಗಿರಿಯ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು, ಆರೋಗ್ಯಕೇಂದ್ರ ಸಿಬ್ಬಂದಿ ವರ್ಗ ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ನಂತರ ಮನೆ ಮನೆಗೆ ತೆರಳಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಭಿತ್ತಿ ಪತ್ರ ಪ್ರದರ್ಶಿಸಿ ಘೋಷಣೆ ಕೂಗಿ ವ್ಯಾಕ್ಸಿನೇಷನ್ ಬಗ್ಗೆ ಜಾಗೃತಿ ಮೂಡಿಸಿದರು.
ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಡಾ.ಎಲ್.ಮಂಜು ಭಾರ್ಗವಿ ಮಾತನಾಡಿ, ಸಮಾಜದಲ್ಲಿ ಇಂತಹ ಸಾಮಾಜಿಕ ಸೇವೆಗಳಲ್ಲಿ ರಾ.ಸೇ.ಯೋ ಸ್ವಯಂ ಸೇವಕರು ತೊಡಗಿಸಿಕೊಳ್ಳಬೇಕೆಂದು ಪ್ರೋತ್ಸಾಹಿಸಿದರು.
ಇಂತಹ ಸಮುದಾಯ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಸಮಯವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು ಮತ್ತು ಕೊಠಡಿ ಶಿಕ್ಷಣದ ಜೊತೆಗೆ ನಮ್ಮ ಸಮಾಜದ ಜವಾಬ್ದಾರಿಯುತ ಪ್ರಜೆಗಳಾಗಿರಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ಮುನೀಂದ್ರ ಕುಮಾರ್ ಹೇಳಿದರು.
ವಿಶೇಷವೆಂದರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಧುಗಿರಿಯ ರಾಷ್ಟ್ರೀಯ ಸೇವಾ ಯೋಜನೆ ಯ ಸ್ವಯಂ ಸೇವಕರು ಕೊವಿಡ್ 19 ಲಸಿಕಾ ಕೇಂದ್ರಗಳಲ್ಲಿ ಕೊವಿಡ್ ವ್ಯಾಕ್ಸಿನೇಷನ್ ಕುರಿತು ಭಿತ್ತಿ ಪತ್ರಗಳು ಮತ್ತು ಘೋಷಣೆಗಳ ಮೂಲಕ ಕೊವಿಡ್ ವ್ಯಾಕ್ಸಿನೇಷನ್ ಬಗ್ಗೆ ಶಿಕ್ಷಣ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!