ಟಿಪ್ಪರ್ ಡಿಕ್ಕಿ- ಮಗು ಸಾವು

36

Get real time updates directly on you device, subscribe now.


ಗುಬ್ಬಿ: ತಾಲ್ಲೂಕಿನ ಎಂ.ಎಚ್.ಪಟ್ಟಣ ಕೆರೆಯ ಸಮೀಪ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿ ಮೂರು ತಿಂಗಳ ಹೆಣ್ಣು ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ.
ಗುಬ್ಬಿ ಪಟ್ಟಣದ ಲೋಕೇಶ್ ಹಾಗೂ ಲಕ್ಷ್ಮಿ ದಂಪತಿ ಮಂಗಳವಾರ ಮಧ್ಯಾಹ್ನ ತಮ್ಮ ದ್ವಿಚಕ್ರ ವಾಹನದಲ್ಲಿ ಗುಬ್ಬಿ ಕಡೆಯಿಂದ ತುಮಕೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಎಂ.ಎಚ್.ಪಟ್ಟಣ ಕೆರೆಯ ಬಳಿ ಮಣ್ಣು ತುಂಬಿಕೊಂಡು ಬರಲು ಹೋಗುತ್ತಿದ್ದ ಟಿಪ್ಪರ್ ಲಾರಿಯು ಏಕಾಏಕಿ ಯಾವುದೇ ಸೂಚನೆ ನೀಡದೆ ಎಡಗಡೆ ತಿರುಗಿದ್ದರಿಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಮಗುವು ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದೆ, ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುಬ್ಬಿ ಪೊಲೀಸರು ಸ್ಥಳಕ್ಕೆ ತೆರಳಿ ತುರ್ತು ಕ್ರಮ ಕೈಗೊಂಡು ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ, ಆಸ್ಪತ್ರೆಯ ಆವರಣದಲ್ಲಿ ಮಗುವಿನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Get real time updates directly on you device, subscribe now.

Comments are closed.

error: Content is protected !!