ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಸಾವು

58

Get real time updates directly on you device, subscribe now.


ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ದಾಸನಕಟ್ಟೆ ಗೊಲ್ಲರಹಟ್ಟಿಯ ಮಮತಾ (19) ಸಾವನ್ನಪ್ಪಿರುವ ಗೃಹಿಣಿ. ಗಂಡನ ಮನೆಯಲ್ಲಿ ವರದಕ್ಷಿಣೆಗೆ ಪೀಡಿಸುತ್ತಿದ್ದ ಕಾರಣ ತವರುಮನೆಯಲ್ಲಿ ಮನೆಯ ತೊಲೆಗೆ ನೇಣು ಹಾಕಿಕೊಂಡು ಸಾವನಪ್ಪಿದ್ದಾರೆ. 2ವರ್ಷಗಳ ಹಿಂದೆ ಮದುವೆಯಾಗಿದ್ದು, ಮೃತ ಮಮತಾಗೆ 8 ತಿಂಗಳ ಹೆಣ್ಣು ಮಗುವಿತ್ತು. ಗಂಡ ಕಿರಣ್ ಹಿರಿಯೂರು ತಾಲ್ಲೂಕಿನ ಹಾಲುಮಾದೇನಹಳ್ಳಿ ಗ್ರಾಮದವರು.
ಪ್ರಕರಣವು ಹೊನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತ ಮಮತಾ ದೇಹವನ್ನು ವೈದ್ಯಕೀಯ ಪರೀಗೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದು ಸ್ಥಳಕ್ಕೆ ಡಿವೈಎಸ್ಪಿ ವಿನಾಯಕ ಶೆಟಗೇರಿ, ವೃತ್ತ ನಿರೀಕ್ಷಕ ಸಿದ್ದರಾಮೇಶ್ವರ, ಹೊನ್ನವಳ್ಳಿ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ರಾಜೇಶ್ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!